ಧರ್ಮಸ್ಥಳ, ಮೇ13(Daijiworld News/SS): ಇಲ್ಲಿನ ಧರ್ಮಸ್ಥಳ ಸಮೀಪದ ನೇತ್ರಾವತಿ ನದಿಯಲ್ಲಿ ಸ್ನಾನಕ್ಕೆಂದು ಇಳಿದಿದ್ದ ಯುವಕನೋರ್ವ ನೀರಿನಲ್ಲಿ ಮುಳುಗಿ ಮೃತಪಟ್ಟಿರುವ ದಾರುಣ ಘಟನೆ ನಡೆದಿದೆ.
ಮೃತಪಟ್ಟವರನ್ನು ಸಂತೋಷ್ (27) ಎಂದು ಗುರುತಿಸಲಾಗಿದೆ.
ಮೃತ ಸಂತೋಷ್ ತನ್ನ ಗೆಳೆಯರೊಂದಿಗೆ ಬೈಕಿನಲ್ಲಿ ಧರ್ಮಸ್ಥಳಕ್ಕೆಂದು ಬಂದಿದ್ದು, ನೇತ್ರಾವತಿ ಹಳೆ ಸೇತುವೆಯ ಸಮೀಪ ಸ್ನಾನಕ್ಕೆಂದು ಇಳಿದಿದ್ದರು. ಈ ವೇಳೆ ಆತ ಕಾಲು ಜಾರಿ ನೀರಿನ ಗುಂಡಿಗೆ ಬಿದ್ದು ಮೃತಪಟ್ಟಿದ್ದಾನೆ ಎಂಬ ಮಾಹಿತಿ ಲಭ್ಯವಾಗಿದೆ.
ಈ ಕುರಿತು ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಹೆಚ್ಚಿನ ಮಾಹಿತಿ ನಿರೀಕ್ಷಿಸಲಾಗಿದೆ.