ಕುಂದಾಪುರ, ಜೂ 22 (DaijiworldNews/MS): ರಾಜ್ಯ ಸರ್ಕಾರ ಇಂಧನ ಬೆಲೆ ಏರಿಕೆ ಮಾಡಿರುವುದನ್ನು ಖಂಡಿಸಿ ಕುಂದಾಪುರ ಮಂಡಲ ಬಿಜೆಪಿ ನೇತೃತ್ವದಲ್ಲಿ ಶುಕ್ರವಾರ ಸಂಜೆ ಕುಂದಾಪುರದ ಶಾಸ್ತವೃತ್ತದ ಬಳಿ ಪ್ರತಿಭಟನೆ ನಡೆಯಿತು.

ಪ್ರತಿಭಟನಾನಿರತರು ಗೂಡ್ಸ್ ರಿಕ್ಷಾಗೆ ಹಗ್ಗ ಕಟ್ಟಿ ಏಳೆಯುವ ಮೂಲಕ ಪೆಟ್ರೋಲ್, ಡಿಸೇಲ್ ಬೆಲೆ ಏರಿಕೆಯನ್ನು ಖಂಡಿಸಿದರು. ಈ ಸಂದರ್ಭದಲ್ಲಿ ಮಾತನಾಡಿದ ಉಡುಪಿ ಜಿಲ್ಲಾ ಬಿಜೆಪಿ ಅಧ್ಯಕ್ಷ ಬಿ.ಕಿಶೋರ್ ಕುಮಾರ್ ಪೆಟ್ರೋಲ್ ಡಿಸೇಲ್ ದರವನ್ನು ಹೆಚ್ಚಳ ಮಾಡಿರುವ ರಾಜ್ಯ ಸರ್ಕಾರದ ಜನವಿರೋಧಿ ನೀತಿ ಖಂಡನಾರ್ಹವಾದುದು. ಗ್ಯಾರಂಟಿಯ ಹೆಸರಲ್ಲಿ ಅಧಿಕಾರಕ್ಕೆ ಬಂದ ಸರಕಾರ ಈಗ ಜನರ ಮೇಲೆ ಬೆಲೆ ಏರಿಕೆಯ ಬರೆಹಾಕಿದೆ ಎಂದರು.
ಕುಂದಾಪುರ ವಿಧಾನಸಭಾ ಕ್ಷೇತ್ರದ ಶಾಸಕ ಕಿರಣ್ ಕುಮಾರ್ ಕೊಡ್ಗಿ, ಉದಯ ಕುಮಾರ ಶೆಟ್ಟಿ, ಕುಂದಾಪುರ ಮಂಡಲದ ಅಧ್ಯಕ್ಷ ಸುರೇಶ ಶೆಟ್ಟಿ, ಮಾಜಿ ಅಧ್ಯಕ್ಷ ಶಂಕರ ಅಂಕದಕಟ್ಟೆ, ಕಾಡೂರು ಸುರೇಶ ಶೆಟ್ಟಿ, ಪ್ರಥ್ವಿರಾಜ್ ಶೇಟ್ಟ, ಮೋಹನದಾಸ ಶೆಣೈ, ಪ್ರಭಾಕರ, ಸಂತೋಷ್ ಕುಮಾರ್ ಶೆಟ್ಟಿ, ರಾಜೇಶ ಕಾವೇರಿ, ವಿಜಯ ಪೂಜಾರಿ, ವಿವಿಧ ಮೋರ್ಛಾಗಳ ಪ್ರಮುಖರು ಉಪಸ್ಥಿತರಿದ್ದರು.