ಪುತ್ತೂರು, ಜೂ.22(DaijiworldNews/AA): ಉಪ್ಪಿನಂಗಡಿ ಪೇಟೆಯಲ್ಲಿರುವ ವಾಣಿಜ್ಯ ಮಳಿಗೆಯ ಫ್ಯಾನ್ಸಿ ಅಂಗಡಿಯೊಂದರಲ್ಲಿ ಜೂನ್ 21ರ ರಾತ್ರಿ ಬೆಂಕಿ ಕಾಣಿಸಿಕೊಂಡಿದ್ದು, ಬಳಿಕ ಪಕ್ಕದಲ್ಲಿನ ಕೆಲವು ಅಂಗಡಿಗಳಿಗೆ ವ್ಯಾಪಿಸಿ ಅಪಾರ ನಷ್ಟವಾಗಿರುವ ಘಟನೆ ನಡೆದಿದೆ.



ವಾಣಿಜ್ಯ ಮಳಿಗೆಲ್ಲಿನ ಅಂಗಡಿ ಮಾಲೀಕರು ರಾತ್ರಿ ತಮ್ಮ ಅಂಗಡಿಗಳನ್ನು ಮುಚ್ಚಿ ಮನೆಗೆ ತೆರಳಿದ್ದ ವೇಳೆ ಈ ಅವಘಡ ಸಂಭವಿಸಿದೆ. ಫ್ಯಾನ್ಸಿ ಅಂಗಡಿಯಲ್ಲಿ ಮೊದಲಿಗೆ ಹೊಗೆ ಕಾಣಿಸಿಕೊಂಡಿದೆ. ಬಳಿಕ ಬೆಂಕಿ ಪಕ್ಕದ ಅಂಗಡಿಗಳಿಗೂ ವ್ಯಾಪಿಸಿದೆ ಎಂದು ಸ್ಥಳೀಯರು ಮಾಹಿತಿ ನೀಡಿದ್ದಾರೆ.
ಬಳಿಕ ಅಗ್ನಿ ಶಾಮಕ ದಳದವರು ಸ್ಥಳಕ್ಕೆ ಆಗಮಿಸಿ ಬೆಂಕಿ ನಂದಿಸುವಲ್ಲಿ ಯಶಸ್ವಿಯಾಗಿದ್ದಾರೆ. ಶಾರ್ಟ್ ಸರ್ಕ್ಯೂಟ್ ನಿಂದ ಈ ಅವಘಡ ಸಂಭವಿಸಿರುವ ಸಾಧ್ಯತೆ ಇದೆ ಎಂದು ಹೇಳಲಾಗುತ್ತಿದೆ.