ಉಡುಪಿ, ಮೇ 14 (Daijiworld News/MSP): ನವೀಕರಣಗೊಂಡಿರುವ ಬಂಟಕಲ್ಲು ದುರ್ಗಾಪರಮೇಶ್ವರಿ ದೇವಸ್ಥಾನದ ಉದ್ಘಾಟನಾ ಸಮಾರಂಭದ ಪ್ರಯುಕ್ತ ಶಿರ್ವ ಆರೋಗ್ಯಮಾತಾ ಇಗರ್ಜಿಯ ಧರ್ಮಗುರುಗಳು ಮತ್ತು ಪಾಲನಾ ಮಂಡಳಿಯ ಸದಸ್ಯರು ಮೇ 13 ರ ಸೋಮವಾರ ದೇವಸ್ಥಾನಕ್ಕೆ ಭೇಟಿ ನೀಡಿ ಶುಭ ಹಾರೈಸಿದರು.
ಈ ಸಂದರ್ಭ ಚರ್ಚಿನ ಪ್ರಧಾನ ಧರ್ಮಗುರುಗಳಾದ ಡೆನಿಸ್ ಡೆಸಾ, ಸಹಾಯಕ ಧರ್ಮಗುರು ಅಶ್ವಿನ್ ಆರಾನ್ಹಾ, ಡೋನ್ ಬೋಸ್ಕೊ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ಮಹೇಶ್ ಡಿಸೋಜಾ, ಪಾಲನಾ ಸಮಿತಿಯ ಉಪಾಧ್ಯಕ್ಷರಾದ ವಿಲ್ಸನ್ ಡಿಸೋಜಾ, ಕಾರ್ಯದರ್ಶಿ ಲೀನಾ ಮಚಾದೊ, ಸದಸ್ಯರಾದ ಮೆಲ್ವಿನ್ ಡಿಸೋಜಾ, ಮೆಲ್ವಿನ್ ಆರಾನ್ಹಾ, ನೋರ್ಬರ್ಟ್ ಮಚಾದೊ ಹಾಗೂ ಇತರರು ಉಪಸ್ಥಿತರಿದ್ದರು. ಈ ವೇಳೆ ದೇವಸ್ಥಾನದ ವತಿಯಿಂದ ಧರ್ಮಗುರುಗಳನ್ನು ಹಾಗೂ ಸದಸ್ಯರುಗಳನ್ನು ಶಾಲು ಹೊದಿಸಿ ಸನ್ಮಾನಿಸಲಾಯಿತು.