ಸುಳ್ಯ, ಜು.03(DaijiworldNews/AA): ರಸ್ತೆಗೆ ಅಡ್ಡಲಾಗಿ ಮರ ಬಿದ್ದ ಪರಿಣಾಮ ಮೈಸೂರು- ಮಾಣಿ ರಾಷ್ಟ್ರೀಯ ಹೆದ್ದಾರಿಯ ದೇವರಕೊಲ್ಲಿ ಸಮೀಪ ವಾಹನ ಸಂಚಾರ ಬಂದ್ ಆಗಿರುವ ಘಟನೆ ಇಂದು ಸಂಜೆ ಸಂಭವಿಸಿದೆ.

ಮಳೆಯಿಂದಾಗಿ ಹೆದ್ದಾರಿ ಬದಿಯ ದೊಡ್ಡ ಮರವೊಂದು ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಪರಿಣಾಮ ಎರಡೂ ಬದಿಗಳಲ್ಲಿ ವಾಹನ ಸಾಲುಗಟ್ಟಿ ನಿಂತಿದ್ದು, ವಾಹನ ಸಂಚಾರ ಸ್ಥಗಿತಗೊಂಡಿದೆ. ಮರವನ್ನು ತೆರವುಗೊಳಿಸುವ ಕಾರ್ಯ ನಡೆಯುತ್ತಿದೆ ಎಂದು ತಿಳಿದುಬಂದಿದೆ.