ಬೆಳ್ತಂಗಡಿ/ ಬಂಟ್ವಾಳ,ಜು 04 (DaijiworldNews/MS): ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಭಾರೀ ಮಳೆಯಾಗುತ್ತಿರುವ ಹಿನ್ನೆಲೆ ಬೆಳ್ತಂಗಡಿ ಹಾಗೂ ಬಂಟ್ವಾಳ ತಾಲೂಕಿನ ಶಾಲೆಗಳಿಗೆ ಜು.4ರ ಗುರುವಾರ ತಹಶೀಲ್ದಾರ್ ರಜೆ ಘೋಷಿಸಿದ್ದಾರೆ.
https://daijiworld.ap-south-1.linodeobjects.com/Linode/img_tv247/ms-040724-rain.jpg
ಬೆಳ್ತಂಗಡಿ ತಾಲೂಕಿನ ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ ಬಿ.ಇ.ಒ/ ತಹಶೀಲ್ದಾರ್ ಮಾಹಿತಿ ನೀಡಿದ್ದಾರೆ.
ತಾಲೂಕಿನಲ್ಲಿ ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳು ಹಳ್ಳ ಕೈಸೇತುವೆಗಳನ್ನು ದಾಟಿ ಶಾಲೆಗೆ ಬರುತ್ತಿರುವ ಕಾರಣ ಮುಂಜಾಗೃತ ಕ್ರಮವಾಗಿ ರಜೆ ಘೋಷಿಸಲಾಗಿದೆ ಎಂದು ತಿಳಿದುಬಂದಿದೆ