ಮಂಜೇಶ್ವರ, ಜು 04 (DaijiworldNews/MS): ಆಟವಾಡುತ್ತಿದ್ದ ಎರಡೂವರೆ ವರ್ಷ ಪ್ರಾಯದ ಮಗುವಿನ ಮೇಲೆ ಆವರಣ ಗೋಡೆಯೊಂದು ಕುಸಿದು ಬಿದ್ದು ಗಂಭೀರ ಗಾಯಗೊಂಡ ಘಟನೆ ಮಂಜೇಶ್ವರ ಕುಂಜತ್ತೂರು ಬಳಿ ನಡೆದಿದೆ.

ಮಂಜೇಶ್ವರ ಪಂಚಾಯತ್ ವ್ಯಾಪ್ತಿಯ ಕುಂಜತ್ತೂರು ಸನ್ನಡ್ಕದಲ್ಲಿ ವಾಸವಾಗಿರುವ ಅನ್ಯರಾಜ್ಯ ಕಾರ್ಮಿಕ ಉತ್ತರ ಪ್ರದೇಶ ನಿವಾಸಿ ಮಹಮ್ಮದ್ ಅಮೀನ್ ಎಂಬವರ ಪುತ್ರ ಎರಡೂವರೆ ವರ್ಷದ ಬಾಲಕ ಶೆರ್ಶಾಝ್ ಶಾ ಗಂಭೀರ ಗಾಯಗೊಂಡ ಬಾಲಕನಾಗಿದ್ದಾನೆ.
ಸಮೀಪ ವಾಸವಾಗಿರುವ ಖಾದರ್ ಎಂಬವರ ಮನೆಯ ಆವರಣ ಗೋಡೆ ಕುಸಿದು ಬಿದ್ದು ಈ ದುರ್ಘಟನೆ ಸಂಭವಿಸಿದೆ. ವಾರ್ಡ್ ಸದಸ್ಯ ಹಾಗೂ ಸ್ಥಳೀಯರ ನೆರವಿನೊಂದಿಗೆ ಮಗುವನ್ನು ಮಂಗಳೂರಿನ ಸರಕಾರಿ ಆಸ್ಪತ್ರೆಯಲ್ಲಿ ದಾಖಲಿಸಲಾಗಿದೆ.