ಬಂಟ್ವಾಳ, ಜು 04 (DaijiworldNews/ Ak): ತಾಲೂಕಿನಾದ್ಯಂತ ಮಳೆ ಹಾನಿ ಮುಂದುವರಿದಿದ್ದು, ಹಲವೆಡೆಗಳಲ್ಲಿ ಹಾನಿ ಸಂಭವಿಸಿದೆ. ಬುಧವಾರ ರಾತ್ರಿಯಿಂದ ಮಳೆ ವ್ಯಾಪಕವಾಗಿದ್ದ ಹಿನ್ನೆಲೆಯಲ್ಲಿ ತಾಲೂಕಿನಾದ್ಯಂತ ಅಂಗನವಾಡಿ, ಪ್ರಾಥಮಿಕ ಹಾಗೂ ಪ್ರೌಢಶಾಲೆಗಳೊಗೆ ಬಂಟ್ವಾಳ ತಹಶೀಲ್ದಾರ್ ಅರ್ಚನಾ ಭಟ್ ರಜೆ ಘೋಷಿಸಿದ್ದರು.


ತಾಲೂಕಿನ ಬಂಟ್ವಾಳ ಕಸ್ಬಾ ಗ್ರಾಮದ ಕೆಳಗಿನ ಮಂಡಾಡಿ ಎಂಬಲ್ಲಿ ನಂದಿನಿ ಎಂಬವರ ಮನೆಯ ಮೇಲ್ಚಾವಣಿಗೆ ಮಳೆಯಿಂದ ಭಾಗಶಃ ಹಾನಿ ಸಂಭವಿಸಿದೆ.ಕಾವಳ ಪಡೂರು ಗ್ರಾಮದ ಮಧ್ವ ಎಂಬಲ್ಲಿ ಯೋಗೀಶ್ ಪೂಜಾರಿಯವರ ಮನೆಗೆ ಮರ ಬಿದ್ದು ಹಾನಿಯಾಗಿದೆ, ಅವಘಡ ನಡೆದ ಸ್ಥಳಗಳಿಗೆ ಕಂದಾಯ ಇಲಾಖೆ ಅಧಿಕಾರಿಗಳು ಭೇಟಿ ನೀಡಿದ್ದು, ಪರಿಹಾರ ಕ್ರಮ ಕೈಗೊಂಡಿದ್ದಾರೆ.