ಕುಂದಾಪುರ, ಜು 04 (DaijiworldNews/ AK): ಕಳೆದ ಕೆಲವು ದಿನಗಳಿಂದ ಸುರಿಯುತ್ತಿರುವ ಭಾರೀ ಮಳೆಗೆ ಕೊಲ್ಲೂರಿನ ದಳಿ ಎಂಬಲ್ಲಿ ವಿಶ್ವನಾಥ ಅಡಿಗರ ಮನೆ ಬಳಿಯಿದ್ದ ಗುಡ್ಡ ಕುಸಿದು ಮನೆ ಮೇಲೆ ಬಿದ್ದ ಪರಿಣಾಮ, ಮನೆಯಲ್ಲಿದ್ದ ಮಹಿಳೆಯೊಬ್ಬರು ಸಾವನ್ನಪ್ಪಿದ್ದಾರೆ.




ಗುರುವಾರ ಸಂಜೆ ಸುಮಾರು ನಾಲ್ಕು ಗಂಟೆಗೆ ದುರ್ಘಟನೆ ನಡೆದಿದ್ದು, ಮೃತಪಟ್ಟ ಮಹಿಳೆಯನ್ನು ಹಳ್ಳಿಬೇರು ನಿವಾಸಿ ಕುಡುಬಿ ಮಹಿಳೆ ಅಂಬಾ (45) ಎಂದು ಗುರುತಿಸಲಾಗಿದೆ.
ವಿಶ್ವನಾಥ ಅಡಿಗರ ಮನೆಯ ಹಿಂಬದಿಗೆ ಗುಡ್ಡ ಕುಸಿದು ಬಿದ್ದಿದ್ದು, ಹಿಂಬದಿಯಲ್ಲಿ ಅಂಬಾ ಅವರು ಪಾತ್ರೆ ತೊಳೆಯುತ್ತಿದ್ದರು ಎನ್ನಲಾಗಿದೆ. ಮನೆಗೂ ಹಾನಿಯಾಗಿದೆ. ಮಹಿಳೆಯ ಮೃತದೇಹವನ್ನು ಕುಂದಾಪುರದ ಸರ್ಕಾರೀ ಆಸ್ಪತ್ರೆಗೆ ಸಾಗಿಸಲಾಗಿದೆ. ಕೊಲ್ಲೂರು ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.