ಮಣಿಪಾಲ, ಜು. 13(DaijiworldNews/AA): ಮನೆಗೆ ನುಗ್ಗಿದ ಕಳ್ಳರು ಚಿನ್ನ ಹಾಗೂ ದಾಖಲೆ ಪತ್ರಗಳನ್ನು ಕಳವು ಮಾಡಿದ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಕಕ್ಕುಂಜೆಯ ಅದಯ್ಯ ಹಿರೇಮಠ ಅವರ ಮನೆಯಲ್ಲಿ ಕಳವು ನಡೆದಿದೆ.
ಮನೆಯ ಹಿಂಬಾಗಿಲಿನ ಚಿಲಕವನ್ನು ತೆರೆದು ಒಳ ನುಗ್ಗಿದ್ದಾರೆ. ಬಳಿಕ ಕಳ್ಳರು ಬೀಗ ಹಾಕದಿದ್ದ ಕಪಾಟಿನಲ್ಲಿದ್ದ 16 ಗ್ರಾಂ ಚಿನ್ನ ಮತ್ತು ದಾಖಲೆಗಳನ್ನು ಕಳ್ಳತನ ಮಾಡಿದ್ದಾರೆ. ಕಳ್ಳತನ ಕೃತ್ಯ ನಡೆದ ಸಂದರ್ಭ ಮನೆಯಲ್ಲಿ ಯಾರೂ ಇರಲಿಲ್ಲ ಎಂದು ತಿಳಿದುಬಂದಿದೆ. ಈ ಬಗ್ಗೆ ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.