ಕಾಸರಗೋಡು, ಜು. 13(DaijiworldNews/AA): ಕಾಸರಗೋಡು ಜಿಲ್ಲಾ ಕನ್ನಡ ಪತ್ರಕರ್ತರ ಕ್ಷೇಮಾಭಿವೃದ್ದಿ ಸಂಘ, ಕರ್ನಾಟಕ ಸರ್ಕಾರದ ಕರ್ನಾಟಕ ಗಡಿ ಪ್ರದೇಶ ಅಭಿವೃದ್ದಿ ಪ್ರಾಧಿಕಾರ, ಕರ್ನಾಟಕ ಪ್ರವಾಸೋದ್ಯಮ ಇಲಾಖೆ ಹಾಗೂ ಬೆಂಗಳೂರಿನ ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ಕೊಡಮಾಡುವ ಶತಾಯುಷಿ, ಸ್ವಾತಂತ್ರ್ಯ ಹೋರಾಟಗಾರ, ಮಾಜಿ ಸಚಿವ ಭೀಮಣ್ಣ ಖಂಡ್ರೆ ಅವರ ಹೆಸರಿನ ದತ್ತಿನಿಧಿ ಪ್ರಶಸ್ತಿಯನ್ನು ದಾಯ್ಜಿವಲ್ಡ್ ಆಡಳಿತ ನಿರ್ದೇಶಕ ವಾಲ್ಟರ್ ನಂದಳಿಕೆ ಅವರಿಗೆ ನೀಡಿ ಗೌರವಿಸಲಾಯಿತು.
















ಈ ದತ್ತಿನಿಧಿ ಪ್ರಶಸ್ತಿ ಪ್ರದಾನ ಮತ್ತು ಕನ್ನಡ ಸಂಸ್ಕೃತಿ ಉತ್ಸವವು ಕಾಸರಗೋಡಿನ ಎಚ್ಎಎಲ್ ಸಮೀಪದ ಸೀತಾಂಗೊಳಿಯ ಅಲಯನ್ಸ್ ಕನ್ವೆನ್ಷನ್ ಸೆಂಟರ್ನಲ್ಲಿ ಇಂದು ನಡೆಯಿತು.