ಬಂಟ್ವಾಳ, ಜು. 15(DaijiworldNews/AK): ದಕ್ಷಿಣ ಕನ್ನಡ ಜಿಲ್ಲಾ ಕಾಂಗ್ರೆಸ್ ಸಮಿತಿಯ ವ್ಯಾಪ್ತಿಯಲ್ಲಿ ಬರುವ ಬಂಟ್ವಾಳ ವಿಧಾನಸಭೆ ಕ್ಷೇತ್ರದ ಬಂಟ್ವಾಳ ಬ್ಲಾಕ್ ಮತ್ತು ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಸಮಿತಿ ಆಧ್ಯಕ್ಷರುಗಳ ಬದಲಾವಣೆ ಮಾಡಿ ಅದೇಶ ಹೊರಡಿಸಿದೆ.

ಬಂಟ್ವಾಳ ಬ್ಲಾಕ್ ಅಧ್ಯಕ್ಷರಾಗಿ ಬಾಲಕೃಷ್ಣ ಆರ್. ಅಂಚನ್ ಹಾಗೂ ಪಾಣೆಮಂಗಳೂರು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾಗಿ ಚಂದ್ರಶೇಖರ್ ಭಂಡಾರಿ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ನೇಮಕ ಮಾಡಲಾಗಿದೆ.
ಬಾಲಕೃಷ್ಣ ಆರ್. ಅಂಚನ್ ಅವರು ತಕ್ಷಣ ಬಂಟ್ವಾಳ ಬ್ಲಾಕ್ ಕಾಂಗ್ರೆಸ್ಸಿನ ಅಧಿಕಾರ ವಹಿಸಿಕೊಂಡು, ಚಂದ್ರಶೇಖರ ಭಂಡಾರಿ ಅವರು ಪಾಣೆಮಂಗಳೂರು ಬ್ಲಾಕ್ ಸಮಿತಿಯ ಅಧಿಕಾರ ವಹಿಸಿಕೊಂಡು, ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಾರ್ಗದರ್ಶನದಲ್ಲಿ ಮತ್ತು ಸ್ಥಳೀಯ ನಾಯಕರ ಸಹಯೋಗದಲ್ಲಿ ಪಕ್ಷದ ಸಂಘಟನೆ ಮತ್ತು ಬಲವರ್ಧನೆಗೆ ಕಾರ್ಯೋನ್ಮುಖರಾಗಬೇಕೆಂದು ರಾಜ್ಯದ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪತ್ರದಲ್ಲಿ ಸೂಚಿಸಿದ್ದಾರೆ.