ಮಂಗಳೂರು, ಜು 17 (DaijiworldNews/MS): ಇಂದು ಮಂಗಳೂರು ಪುರಭವನದಲ್ಲಿ ಅಗಲಿದ ರಂಗಕರ್ಮಿ, ಸಿನೆಮಾ ನಿರ್ಮಾಪಕ, ನಿರ್ದೇಶಕ ಸದಾನಂದ ಸುವರ್ಣ ಅವರಿಗೆ ಅಂತಿಮ ವಿದಾಯ ಕೋರಲಾಯಿತು.

ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್, ವಿಧಾನ ಪರಿಷತ್ ಸದಸ್ಯ ಹರೀಶ್ ಕುಮಾರ್, ಡಾ.ಪ್ರಭಾಕರ ಜೋಷಿ, ದಿನೇಶ್ ಅಮೀನ್ ಮಟ್ಟು, ಡಾ. ಚಿನ್ನಪ್ಪ ಗೌಡ ಸೇರಿದಂತೆ ರಂಗಭೂಮಿ, ಸಾಹಿತ್ಯ ಸಹಿತ ವಿವಿಧ ಕ್ಷೇತ್ರಗಳ ಪ್ರಮುಖರು ಅಂತಿಮ ನಮನ ಸಲ್ಲಿಸಿದರು. ಸದಾನಂದ ಸುವರ್ಣ ಅವರ ಇಚ್ಚೆಯಂತೆ ಮಣಿಪಾಲ ಕೆಎಂಸಿ ಆಸ್ಪತ್ರೆಗೆ ಅವರ ದೇಹ ದಾನ ಮಾಡಲಾಯಿತು
ದಕ್ಷಿಣ ಕನ್ನಡ ಜಿಲ್ಲೆಯ ಮೂಲ್ಕಿಯವರಾದ ಅವರು 1931, ಡಿಸೆಂಬರ್ 24 ರಂದು ಜನಿಸಿದ್ದರು. ಅವರು ನಿರ್ಮಿಸಿದ ಮೊದಲ ಸಿನಿಮಾ ಘಟಶ್ರಾದ್ಧ. ಗಿರೀಶ್ ಕಾಸರವಳ್ಳಿ ನಿರ್ದೇಶನದ ಮೊದಲ ಸಿನಿಮಾವಿದು. ಬಳಿಕ ಗಿರೀಶ್ ಕಾಸರವಳ್ಳಿ ನಿರ್ದೇಶಿಸಿದ ಮನೆ, ಕುಬಿ ಮತ್ತು ಇಯಾಲ, ತಬರನ ಕಥೆ ಸಿನಿಮಾಗಳ ಕಾರ್ಯನಿರ್ವಾಹಕ ನಿರ್ಮಾಪಕರಾಗಿದ್ದರು. ದೂರದರ್ಶನಕ್ಕೆ ಗುಡ್ಡದ ಭೂತ ಧಾರಾವಾಹಿ ನಿರ್ಮಿಸಿ, ನಿರ್ದೇಶಿಸಿದ್ದರು. ಇದು ಪ್ರಕಾಶ್ ರೈ ಅವರಿಗೆ ಜನಪ್ರಿಯತೆ ತಂದು ಕೊಟ್ಟಿತು.