ಉಡುಪಿ, ನ 24: ಪೇಜಾವರ ಹಿರಿಯ ಯತಿ ವಿಶ್ವೇಶ್ವ ತೀರ್ಥ ಸ್ವಾಮೀಜಿಯವರ ಕಣ್ಣೆದುರೇ ಅಯೋಧ್ಯೆಯಲ್ಲಿ ರಾಮ ಮಂದಿರ ನಿರ್ಮಾಣವಾಗಬೇಕು. ಭಾರತ ದೇಶ ರಾಮರಾಜ್ಯ ಆಗಬೇಕು ಎಂದು ವಿಶ್ವ ಹಿಂದೂ ಪರಿಷತ್ನ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ಭಾಯ್ ತೊಗಾಡಿಯಾ ಹೇಳಿದ್ದಾರೆ.
ಕೃಷ್ಣನಗರಿಯಲ್ಲಿ ನಡೆಯುತ್ತಿರುವ ಧರ್ಮಸಂಸದ್ ಸಮ್ಮೇಳನದಲ್ಲಿ ಮಾತನಾಡಿದ ಅವರು, ಹಿಂದೂ ದೇವಾಲಯಗಳ ಆಡಳಿತವನ್ನು ಸರ್ಕಾರಗಳು ನಿರ್ವಹಿಸುತ್ತಿದೆ. ಇದು ಸಂವಿಧಾನ ವಿರೋಧಿಯಾಗಿದ್ದು, ಜಾತ್ಯಾತೀತ ಸಂವಿಧಾನಕ್ಕೆ ಮಾಡುವ ಅಪಚಾರ ಎಂದು ಹೇಳಿದರು.
ಹಿಂದೂ ದೇವಾಲಯಗಳನ್ನು ಸರ್ಕಾರದ ಹಿಡಿತದಿಂದ ಮುಕ್ತಗೊಳಿಸಬೇಕು. ಈ ಧರ್ಮ ಕಾರ್ಯಕ್ಕೆ ಸ್ವಾಮೀಜಿಗಳು, ಸಂತರು ಶ್ರಮಿಸಬೇಕು. ಮಾತೆ ಗೋವಿನ ರಕ್ಷಣೆಗೆ ಗೋಹತ್ಯೆ ನಿಷೇಧ ಜಾರಿಗೆ ಕಾರ್ಯತಂತ್ರ ರೂಪಿಸಬೇಕು ಎಂದು ತಿಳಿಸಿದರು.