ಬಂಟ್ವಾಳ, ನ 25:ಅಕ್ರಮವಾಗಿ ಸಾಗಣೆ ಮಾಡುತ್ತಿದ ಪಡಿತರ ಅಕ್ಕಿಯನ್ನು ಅಧಿಕಾರಿಗಳು ದಾಳಿ ನಡೆಸಿ ವಶಪಡಿಸಿಕೊಂಡಿರುವ ಘಟನೆ ಬಂಟ್ವಾಳದಲ್ಲಿ ನಡೆದಿದೆ.
ಬಿ.ಸಿ.ರೋಡಿನಿಂದ ಕೇರಳಕ್ಕೆ ಲಕ್ಷಾಂತರ ರೂ. ಮೌಲ್ಯದ ಪಡಿತರ ಅಕ್ಕಿ ಅಕ್ರಮವಾಗಿ ಸಾಗಾಟ ಮಾಡಲು ಮುಂದಾಗುತ್ತಿರುವಾಗ ಬಂಟ್ವಾಳ ಡಿಎಸ್ಪಿ ದಾಳಿ ನಡೆಸಿದ್ದಾರೆ. 2.60 ಲಕ್ಷ ರೂ. ಅಂದಾಜು ಮೌಲ್ಯ ಅಕ್ಕಿಯನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಅಂದಾಜಿಸಲಾಗಿದೆ. ದಾಳಿಯ ವೇಳೆ ಆರೋಪಿಗಳು ಪರಾರಿಯಾಗಿದ್ದಾರೆ.
ಬಂಟ್ವಾಳ ಬಿ.ಮೂಡ ಗ್ರಾಮದ ಶಾಂತಿ ಅಂಗಡಿ ಎಲ್ಐಸಿ ಕಚೇರಿಯ ಮುಂಭಾಗದಲ್ಲಿ ಪಡಿತರ ಅಕ್ಕಿಯನ್ನು ಒಂದು ಲಾರಿಯಿಂದ ಇನ್ನೊಂದು ಲಾರಿ ಮತ್ತು ರಿಕ್ಷಾ ಟೆಂಪೋವೊಂದಕ್ಕೆ ಲೋಡ್ ಮಾಡುತ್ತಿರುವ ವೇಳೆ ಖಚಿತ ಮಾಹಿತಿ ಪಡೆದ ಡಿವೈಎಸ್ಪಿ ಅರುಣ್ ಕುಮಾರ್ ನೇತೃತ್ವ ತಂಡವು ಈ ದಾಳಿ ನಡೆಸಿದೆ.
ಕಾರ್ಯಾಚರಣೆಯಲ್ಲಿ ಬಂಟ್ವಾಳ ನಗರ ಠಾಣಾ ಎಸ್ಸೈ ಚಂದ್ರಶೇಖರ್, ಸಿಬ್ಬಂದಿಗಳು ಮತ್ತು ಕಂದಾಯ ಅಧಿಕಾರಿಗಳು ಹಾಜರಿದ್ದರು.