ಮೈಸೂರು, ನ 25: ಮೈಸೂರು ಮೃಗಾಲಯದಲ್ಲಿ ಜಿರಾಫೆಯೊಂದು ಅನಾರೋಗ್ಯದಿಂದ ಮೃತಪಟ್ಟಿರುವ ಘಟನೆ ನಡೆದಿದೆ.
ಕೃಷ್ಣರಾಜ ಎಂಬ ಹೆಸರಿನ ಗಂಡು ಜಿರಾಫೆ ಇದಾಗಿದ್ದು, 22 ವರ್ಷ ಪ್ರಾಯವಾಗಿತ್ತು. ಅನಾರೋಗ್ಯದಿಂದ ಮೃತಪಟ್ಟಿರಬಹುದು ಎಂದು ಹೇಳಲಾಗುತ್ತಿದೆ.
ಮೃಗಾಲಯದ ಪ್ರಮುಖ ಆಕರ್ಷಣೆಯಾಗಿದ್ದ ಕೃಷ್ಣರಾಜನೆಂದರೆ ಎಲ್ಲರಿಗೂ ಅಚ್ಚುಮೆಚ್ಚು. ಈ ಜಿರಾಫೆ ಮೈಸೂರು ಮೃಗಾಲಯದಲ್ಲೆ ಜನಿಸಿದ್ದು, ಶುಕ್ರವಾರ ತಡರಾತ್ರಿ ಸಾವನ್ನಪ್ಪಿದೆ. ಮರಣೋತ್ತರ ಪರೀಕ್ಷೆ ನಡೆಯುತ್ತಿದ್ದು, ವರದಿ ಬಂದ ನಂತರವಷ್ಟೇ ಸಾವಿನ ನಿಖರ ಕಾರಣ ತಿಳಿಯಬೇಕಿದೆ.