ಮೈಸೂರು, ನ 25: ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ನಡೆದ 83ನೇ ಕನ್ನಡ ಸಾಹಿತ್ಯ ಪರಿಷತ್ ಸಮ್ಮೇಳನದಲ್ಲಿ ಮೈಸೂರು ರಾಜವಂಶದ ಮನೆತನಕ್ಕೆ ಆಹ್ವಾನವನ್ನೇ ನೀಡಿಲ್ಲ ಎಂಬ ಆರೋಪ ಕೇಳಿಬಂದಿದೆ.
ಕನ್ನಡ ಸಾಹಿತ್ಯ ಪರಿಷತ್ನ ಸ್ವಾಗತ ಸಮಿತಿ ರಾಜವಂಶಸ್ಥರಿಗೆ ಆಹ್ವಾನವನ್ನು ನೀಡದೇ ನಿರ್ಲಕ್ಷ್ಯವಹಿಸಿರುವುದು ಸಾರ್ವಜನಿಕರ ಅಸಮಾಧಾನಕ್ಕೆ ಕಾರಣವಾಗಿದೆ. ಮೈಸೂರು ಒಡೆಯರ್ ರಾಜಮನೆತನದ ರಾಜಮಾತೆ ಪ್ರಮೋದಾದೇವಿ ಒಡೆಯರ್ ಅವರಿಗೂ ಸಮಿತಿ ಆಹ್ವಾನವನ್ನು ನೀಡಿಲ್ಲ. ಹೀಗಾಗಿ ಕನ್ನಡ ಸಾಹಿತ್ಯ ಪರಿಷತ್ ಮೈಸೂರು ರಾಜವಂಶಸ್ಥರಿಗೆ ಸಮ್ಮೇಳನದಲ್ಲಿ ಅಗೌರವ ನೀಡಿದ್ದಾರೆ ಎನ್ನುವುದು ಸಾಬೀತಾಗಿದೆ.
ಸಾಹಿತ್ಯ ಸಮ್ಮೇಳನದಲ್ಲಿ ನಾಲ್ವಡಿ ಕೃಷ್ಣರಾಜ ಒಡೆಯರ್ ಮಹಾಮಂಟಪ ನಿರ್ಮಾಣ ಮಾಡಿದೆ. ಆದರೆ ರಾಜವಂಶಸ್ಥರಿಗೆ ಆಹ್ವಾನ ನೀಡದೇ ಅಪಮಾನ ಮಾಡಿದ್ದಾರೆ ಎನ್ನುವ ಟೀಕೆ ಕೇಳಿಬಂದಿದೆ.