ಮಂಡ್ಯ, ಆ 16 (DaijiworldNews/MS): ಮಂಡ್ಯ ಜಿಲ್ಲೆಯಲ್ಲಿನಾಗಮಂಗಲದ ಮಾವಿನಕೆರೆ ತೋಟದ ಮನೆಯಲ್ಲಿ ಭ್ರೂಣ ಹತ್ಯೆ ದಂಧೆ ನಡೆಯುತ್ತಿರುವುದು ಬೆಳಕಿಗೆ ಬಂದಿದೆ. ತೋಟದ ಮನೆಯಲ್ಲಿ ಭೂಣಲಿಂಗ ಪತ್ತೆ ಮಾಡುತ್ತಿದ್ದ ವೇಳೆಯೇ ಡಿಹೆಚ್ ಒ ಡಾ.ಮೋಹನ್ ನೇತೃತ್ವದ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಈ ವೇಳೆ ಭ್ರೂಣ ಹತ್ಯೆ ಕಿಟ್, ಸ್ಕ್ಯಾನಿಂಗ್ ಯಂತ್ರ ಪತ್ತೆಯಾಗಿದೆ. ಅಲ್ಲದೇ ಭ್ರೂಣಲಿಂಗ ಪತ್ತೆಗಾಗಿ ಕರೆತರಲಾಗಿದ್ದ ಹಾಸನ ಮೂಲದ ಗರ್ಭಿಣಿಯನ್ನು ರಕ್ಷಿಸಲಾಗಿದೆ.
ಅಧಿಕಾರಿಗಳು ದಾಳಿ ನಡೆಸುತ್ತಿದ್ದಂತೆ ಸ್ಕ್ಯಾನಿಂಗ್ ಮಾಡುತ್ತಿದ್ದ ಆರೋಪಿ ಅಭಿಷೇಕ್ ಪರಾರಿಯಾಗಿದ್ದಾನೆ. ಪ್ರಕರಣ ಸಂಬಂಧ ಮನೆಯ ಮಾಲೀಕ ಧನಂಜಯ್, ಆರೋಗ್ಯ ಇಲಾಖೆಯ ಗ್ರೂಪ್ ಡಿ ನೌಕರೆ ಹಾಗೂ ಗರ್ಭಿಣಿಯ ಪತಿ ಸೇರಿ ಮೂವರನ್ನು ಬಂಧಿಸಲಾಗಿದೆ. ಭ್ರೂಣ ಪತ್ತೆ ಕೇಂದ್ರವನ್ನು ಸೀಜ್ ಮಾಡಲಾಗಿದೆ.