ನವದೆಹಲಿ, ಆ 16 (DaijiworldNews/MS): ಕೇಂದ್ರ ಚುನಾವಣಾ ಆಯೋಗ(ಇಸಿಐ) ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಶುಕ್ರವಾರ ಪ್ರಕಟಿಸಿದೆ.
ಇಂದು ದೆಹಲಿಯಲ್ಲಿ ಪತ್ರಿಕಾಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಮುಖ್ಯ ಚುನಾವಣಾ ಆಯುಕ್ತ ರಾಜೀವ್ ಕುಮಾರ್ ಅವರು ಜಮ್ಮು ಮತ್ತು ಕಾಶ್ಮೀರ ಕೇಂದ್ರಾಡಳಿ ಪ್ರದೇಶ ಎಂದು ಘೋಷಿಸಿದ ನಂತರ ಮೊದಲ ಬಾರಿಗೆ ವಿಧಾನಸಭೆ ಚುನಾವಣೆ ಎದುರಿಸುತ್ತಿದ್ದು, ಸೆಪ್ಟೆಂಬರ್ 18, ಸೆಪ್ಟೆಂಬರ್ 25 ಮತ್ತು ಅಕ್ಟೋಬರ್ 1 ರಂದು ಮೂರು ಹಂತದಲ್ಲಿ ಮತದಾನ ನಡೆಯಲಿದೆ. ಜಮ್ಮು ಮತ್ತು ಕಾಶ್ಮೀರಕ್ಕೆ ಭದ್ರತಾ ಅಗತ್ಯತೆಗಳ ಕಾರಣದಿಂದ ಮಹಾರಾಷ್ಟ್ರ ಚುನಾವಣೆಯನ್ನು ನಂತರ ಘೋಷಿಸಲಾಗುವುದು ಎಂದು
ನಾವು ಇತ್ತೀಚೆಗೆ ಜಮ್ಮು ಮತ್ತು ಕಾಶ್ಮೀರ ಹಾಗೂ ಹರಿಯಾಣಕ್ಕೆ ಭೇಟಿ ಚುನಾವಣಾ ಸಿದ್ಧತೆಗಳನ್ನು ಪರಿಶೀಲಿಸಿದ್ದೇವೆ. ಜನರಲ್ಲಿ ಹೆಚ್ಚಿನ ಉತ್ಸಾಹ ಕಂಡುಬಂದಿದೆ. ಅವರು ಚುನಾವಣಾ ಪ್ರಕ್ರಿಯೆಯಲ್ಲಿ ಭಾಗವಹಿಸಲು ಬಯಸಿದ್ದಾರೆ. ಜನರು ಚುನಾವಣೆಗಳನ್ನು ಬಯಸುತ್ತಾರೆ ಹರಿಯಾಣ ಅಕ್ಟೋಬರ್ 1 ರಂದು ಮತದಾನ; ಅಕ್ಟೋಬರ್ 4 ರಂದು ಮತ ಎಣಿಕೆ ಎಂದಿದ್ದಾರೆ. .