ನವದೆಹಲಿ, ಆ.18(DaijiworldNews/AA): ಕೋಲ್ಕತಾದಲ್ಲಿ ವೈದ್ಯೆಯ ಅತ್ಯಾಚಾರ ಹಾಗು ಕೊಲೆಯ ಖಂಡಿಸಿ ದೇಶಾದ್ಯಂತ ಪ್ರತಿಭಟನೆಗಳು ನಡೆಯುತ್ತಿವೆ. ಸಂತ್ರಸ್ತೆ ಸಾವಿಗೆ ನ್ಯಾಯ ಸಿಗಬೇಕು, ಅಪರಾಧಿಗೆ ತಕ್ಕ ಶಿಕ್ಷೆಯಾಗಬೇಕು ಎಂಬ ಕೂಗು ಕೇಳಿಬರುತ್ತಿರುವ ಬೆನ್ನಲ್ಲೇ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂಕೋರ್ಟ್ ಸ್ವಪ್ರೇರಿತವಾಗಿ ವಿಚಾರಣೆ ಕೈಗೆತ್ತಿಕೊಂಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರವೇಶಿರುವ ಸುಪ್ರೀಂಕೋರ್ಟ್, ಮಂಗಳವಾರ ವಿಚಾರಣೆ ನಡೆಯಲಿದೆ ಎಂದು ತಿಳಿಸಿದೆ. ಮುಖ್ಯ ನ್ಯಾಯಮೂರ್ತಿ ಡಿ.ವೈ.ಚಂದ್ರಚೂಡ ಇರುವ ನ್ಯಾಯಪೀಠ ಮಂಗಳವಾರ ಈ ಪ್ರಕರಣದ ವಿಚಾರಣೆ ನಡೆಸಲಿದೆ.
ಪಶ್ಚಿಮ ಬಂಗಾಳದ ಕೋಲ್ಕತಾ ಆರ್ಜಿ ಕರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯಲ್ಲಿ ನಡೆದಿರುವ ಟ್ರೈನಿ ವೈದ್ಯೆಯ ಅತ್ಯಾಚಾರ ಹಾಗೂ ಬರ್ಬರ ಕೊಲೆ ಖಂಡಿಸಿ ದೇಶದಾದ್ಯಂತ ಆಕ್ರೋಶ ಭುಗಿಲೆದ್ದಿದೆ. ಈ ಮಧ್ಯೆ ನಿರ್ಭಯಾ ಅವರ ತಾಯಿ ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದು, ಪರಿಸ್ಥಿತಿ ನಿಯಂತ್ರಿಸಲು ಅಸಮರ್ಥರಾದ ಕಾರಣ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.