ಬೆಂಗಳೂರು, ಆ.18 (DaijiworldNews/AK) : ಚನ್ನಪಟ್ಟಣ ಉಪಚುನಾವಣೆಗೆ ಯಾವ ಪಕ್ಷದವರು ಅಭ್ಯರ್ಥಿ ಯಾಗಿ ಕಣಕ್ಕೆ ಇಳಿಯಬೇಕು ಎಂಬುದನ್ನು ಜೆಡಿಎಸ್ ಮತ್ತು ಬಿಜೆಪಿ ನಾಯಕರು ಚರ್ಚಿಸಿ ತೀರ್ಮಾನ ತೆಗೆದುಕೊಳ್ಳಲಿದ್ದಾರೆ ಎಂದು ಜೆಡಿಎಸ್ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಹೇಳಿದರು.
ನಗರದ ಜೆಪಿಭವನದಲ್ಲಿ ಭಾನುವಾರ ನಡೆದ ಸಭೆಯಲ್ಲಿ ಮಾತನಾಡಿ, ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ನೇತೃತ್ವದಲ್ಲಿ ನಡೆದ ಸಭೆಯಲ್ಲಿ ಮುಂಬರುವ ಜಿಲ್ಲಾ ಮತ್ತು ತಾಲ್ಲೂಕು ಪಂಚಾಯತಿ ಚುನಾವಣೆಗಳ ಸಿದ್ಧತೆ ಬಗ್ಗೆ ಚರ್ಚಿ ಸಲಾಯಿತು ಎಂದರು.
ಲೋ ಕಸಭಾ ಚುನಾವಣೆಯನ್ನು ಜೆಡಿಎಸ್–ಬಿಜೆಪಿ ಮೈತ್ರಿಮಾಡಿಕೊಂಡು ಎದುರಿಸಿವೆ. ಚನ್ನಪಟ್ಟಣ ಉಪಚುನಾವಣೆಯನ್ನೂ ಅದೇ ರೀತಿ ಎದುರಿಸಬೇಕಾಗುತ್ತದೆ. ಕ್ಷೇತ್ರವನ್ನು ಪಕ್ಷದಲ್ಲೇ ಉಳಿಸಿಕೊಳ್ಳಬೇಕೇ ಅಥವಾ ಬಿಜೆಪಿಗೆ ಬಿಟ್ಟುಕೊಟ್ಟು ಸಹಕರಿಸಬೇಕೇ ಎಂಬುದನ್ನು ಚರ್ಚಿಸಿ ನಿರ್ಧರಿಸಲಾಗುತ್ತದೆ ಎಂದರು.