ಬೆಂಗಳೂರು, ಆ.19, (DaijiworldNews/TA) : ರಾಜಕೀಯ ಜೀವನದಲ್ಲಿ ಸಿಎಂ ಸಿದ್ದರಾಮಯ್ಯ ಅವರಿಗೆ ಸಿಎಂ ಸಿದ್ದರಾಮಯ್ಯ ಅವರಿಗೆ ಪರೀಕ್ಷೆ ಎದುರಾಗಿದೆ. ಮುಡಾ ಹಗರಣ ಇದೀಗ ಸಿಎಂ ಗೆ ಮುಳ್ಳಾಗಿ ಪರಿಣಮಿಸಿದೆ.
ಹೀಗಾಗಿ ಸಂಕಷ್ಟದಿಂದ ಪಾರಾಗಲು ಅವರು ಕಾನೂನು ಸಮರಕ್ಕೆ ಮುಂದಾಗಿದ್ದಾರೆ. ಭಾನುವಾರವೂ ಸಚಿವರು, ವಕೀಲರ ಜೊತೆ ಸಭೆ ನಡೆಸಿದ ಸಿಎಂ ಪ್ರಾಸಿಕ್ಯೂಷನ್ ಪ್ರಶ್ನಿಸಿ ಹೈಕೋರ್ಟ್ನಲ್ಲಿ ಇಂದು ಅರ್ಜಿಯನ್ನು ಸಲ್ಲಿಸಲಿದ್ದಾರೆ.
ಮುಡಾ ವಿಚಾರವಾಗಿ ರಾಜ್ಯಪಾಲರ ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂಕೋರ್ಟ್ನಲ್ಲೂ ಅರ್ಜಿ ಸಲ್ಲಿಸಲು ಚಿಂತನೆ ನಡೆದಿತ್ತು. ಆದರೆ, ಸುಪ್ರೀಂ ಮೊರೆ ಹೋದರೆ, ಪ್ರಕರಣ ಹೈಕೋರ್ಟ್ಗೆ ವರ್ಗಾವಣೆಯಾಗಬಹುದು ಎಂದು ವಕೀಲರು ಸಲಹೆ ನೀಡಿದ ಕಾರನ ಹೈಕೋರ್ಟ್ನಲ್ಲೇ ಇಂದು ರಿಟ್ ಅರ್ಜಿ ಸಲ್ಲಿಸಲಿದ್ದಾರೆ.
ಸಿಎಂ ಪರ ವಾದ ಮಂಡಿಸಲು ಹಿರಿಯ ವಕೀಲರಾದ ಅಭಿಷೇಕ್ ಸಿಂಘ್ವಿ, ಕಪಿಲ್ ಸಿಬಲ್ ಇಂದು ಬೆಂಗಳೂರಿಗೆ ಆಗಮಿಸ್ತಿದ್ದಾರೆ. ಘಟಾನುಘಟಿ ವಕೀಲರೇ ಕಣಕ್ಕಿಳಿಯುತ್ತಿದ್ದಾರೆ.