ನವದೆಹಲಿ, ಆ 19 (DaijiworldNews/MS): ದೆಹಲಿಯ ವಿಜ್ಞಾನ ಭವನದಲ್ಲಿಂದು ಸಾರ್ವಜನಿಕ ವಲಯದ ಬ್ಯಾಂಕ್ ಗಳು ಮತ್ತು ಪ್ರಾದೇಶಿಕ ಗ್ರಾಮೀಣ ಬ್ಯಾಂಕ್ ಗಳ ಮುಖ್ಯಸ್ಥರೊಂದಿಗೆ ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ನಡೆಸುತ್ತಿರುವ ಸಭೆ ಪ್ರಗತಿಯಲ್ಲಿದೆ.
ಈ ಸಭೆಯಲ್ಲಿ, ಹಣಕಾಸು ಸಚಿವಾಲಯದ ಕಾರ್ಯದರ್ಶಿ ಡಾ. ವಿವೇಕ ಜೋಶಿ, ಕಲ್ಲಿದ್ದಲು ಸಚಿವಾಲಯದ ಹೆಚ್ಚುವರಿ ಕಾರ್ಯದರ್ಶಿ ಎಂ.ನಾಗರಾಜು ಸೇರಿದಂತೆ ವಿವಿಧ ಇಲಾಖೆಗಳ ಹಿರಿಯ ಅಧಿಕಾರಿಗಳು ಹಾಗೂ ಸಿಇಒಗಳು ಭಾಗವಹಿಸಿದ್ದಾರೆ. ಸಭೆಯಲ್ಲಿ ಬ್ಯಾಂಕ್ ಗಳ ಕಾರ್ಯಕ್ಷಮತೆ , ಪ್ರಮುಖ ಹಣಕಾಸಿನ ನಿರ್ವಹಣೆ ವಿವಿಧ ಸರ್ಕಾರಿ ಯೋಜನೆಗಳ ಪರಿಣಾಮಕಾರಿ ಮೌಲ್ಯಮಾಪನ ಮಾಡುವುದು ಹಾಗೂ ದೇಶದ ಆರ್ಥಿಕ ಹಣಕಾಸಿನ ಪರಿಸ್ಥಿತಿ ಕುರಿತು ಪರಾಮರ್ಶೆ ನಡೆಸಲಾಗುತ್ತಿದೆ. ಅಲ್ಲದೆ, ಠೇವಣಿ ಬೆಳವಣಿಗೆ, ಠೇವಣಿ ಅನುಪಾತಕ್ಕೆ ಸಾಲ ಸೌಲಭ್ಯ ಸೇರಿದಂತೆ ಬ್ಯಾಂಕ್ ಗಳ ಇತರೆ ವಹಿವಾಟುಗಳ ಕೇಂದ್ರೀಕರಿಸಿ, ಈ ಸಭೆ ನಡೆಯಲಿದೆ.
ಪ್ರಧಾನಮಂತ್ರಿ ಅವಾಸ್ ಯೋಜನೆ , ಪ್ರಧಾನಮಂತ್ರಿ ಸೂರ್ಯಘರ್ ಮತ್ತು ಪ್ರಧಾನಮಂತ್ರಿ ವಿಶ್ವಕರ್ಮ ಸೇರಿದಂತೆ ಕೇಂದ್ರ ಸರ್ಕಾರದ ಇತರ ಯೋಜನೆಗಳ ಪ್ರಗತಿಯ ಕುರಿತು ಸಹ ನಿರ್ಮಲಾ ಸೀತಾರಾಮನ್ ಬ್ಯಾಂಕ್ ಗಳ ಮುಖ್ಯಸ್ಥರೊಂದಿಗೆ ಚರ್ಚೆ ನಡೆಸಲಿದ್ದಾರೆ.