ಕೋಲ್ಕತ್ತ, ಆ.19(DaijiworldNews/AA): ಆರ್.ಜಿ.ಕರ್ ವೈದ್ಯಕೀಯ ಕಾಲೇಜಿನಲ್ಲಿ ಅತ್ಯಾಚಾರ ಮತ್ತು ಹತ್ಯೆಯಾದ ವಿದ್ಯಾರ್ಥಿನಿಯ ಚಿತ್ರವನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಹಂಚಿಕೊಂಡಿದ್ದ ಹಾಗೂ ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಅವರಿಗೆ ಜೀವ ಬೆದರಿಕೆ ಒಡ್ಡಿದ್ದ ವ್ಯಕ್ತಿಯನ್ನು ಬಂಧಿಸಲಾಗಿದೆ.
ಬಂಧಿತ ವಿದ್ಯಾರ್ಥಿನಿಯನ್ನು ಕೀರ್ತಿ ಶರ್ಮಾ ಎಂದು ಗುರುತಿಸಲಾಗಿದೆ. ಆರೋಪಿ ವಿರುದ್ಧ ತಲ್ತಲಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆಕೆಯನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುವುದು ಎಂದು ಪೊಲೀಸರು ಇಂದು ತಿಳಿಸಿದ್ದಾರೆ.
ಈ ಸಂಬಂಧ ಪೊಲೀಸ್ ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದು, 'ಕೊಲೆ ಮತ್ತು ಹತ್ಯೆ ಪ್ರಕರಣದ ಸಂತ್ರಸ್ತೆಯ ಗುರುತನ್ನು ಬಹಿರಂಗಪಡಿಸುವ ಸ್ಟೋರಿಗಳನ್ನು 'ಕೀರ್ತಿಸೋಷಿಯಲ್' ಎಂಬ ಇನ್ಸ್ಟಾಗ್ರಾಂ ಖಾತೆಯಲ್ಲಿ ಹಂಚಿಕೊಳ್ಳಲಾಗಿತ್ತು. ಅದಕ್ಕೆ ಸಂಬಂಧಿಸಿದಂತೆ ಆರೋಪಿಯ ವಿರುದ್ಧ ದೂರು ದಾಖಲಾಗಿತ್ತು' ಎಂದು ಹೇಳಿದ್ದಾರೆ.
'ಸಿಎಂ ಅವರ ವಿರುದ್ಧ ಅವಹೇಳನಕಾರಿ ವಿಚಾರ ಮತ್ತು ಅವರಿಗೆ ಜೀವ ಬೆದರಿಕೆ ಒಡ್ಡುವ ಅಂಶಗಳನ್ನು ಒಳಗೊಂಡ ಎರಡು ಸ್ಟೋರಿಗಳನ್ನೂ ಆರೋಪಿ ಹಂಚಿಕೊಂಡಿದ್ದ. ಪ್ರಚೋದನಕಾರಿಯಾಗಿದ್ದ ಆ ಸ್ಟೋರಿಗಳು, ಸಮಾಜದಲ್ಲಿ ಕಲಹ ಮತ್ತು ಸಮುದಾಯಗಳ ನಡುವೆ ದ್ವೇಷ ಹುಟ್ಟುಹಾಕುವ ಸಾಧ್ಯತೆ ಇತ್ತು' ಎಂದು ಅವರು ಮಾಹಿತಿ ನೀಡಿದ್ದಾರೆ.