ತಿರುವನಂತಪುರ, ಆ.22(DaijiworldNews/AK):ಮುಂಬೈನಿಂದ ಬಂದ ಏರ್ ಇಂಡಿಯಾ ವಿಮಾನಕ್ಕೆ ಬಾಂಬ್ ಬೆದರಿಕೆಯ ಹಿನ್ನೆಲೆಯಲ್ಲಿ ತಿರುವನಂತಪುರ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲಾಗಿದೆ ಎಂದು ವಿಮಾನ ನಿಲ್ದಾಣದಮೂಲಗಳು ತಿಳಿಸಿವೆ.
ವಿಮಾನದಲ್ಲಿ 135 ಪ್ರಯಾಣಿಕರಿದ್ದರು. ವಿಮಾನವು ಬೆಳಿಗ್ಗೆ 8 ಗಂಟೆಯ ಸುಮಾರಿಗೆ ವಿಮಾನ ನಿಲ್ದಾಣದಲ್ಲಿ ಇಳಿದಿದ್ದು, ಪ್ರಯಾಣಿಕರನ್ನು ಇಳಿಸಿದ ನಂತರ, ಶಿಷ್ಟಾಚಾರದಂತೆ ವಿಮಾನವನ್ನು ಪ್ರತ್ಯೇಕ ಸ್ಥಳಕ್ಕೆ ಒಯ್ಯಲಾಗಿದೆ.
ವಿಮಾನವು ತಿರುವನಂತಪುರ ವಿಮಾನ ನಿಲ್ದಾಣವನ್ನು ಸಮೀ ಪಿಸುತ್ತಿದ್ದಂತೆ ಬಾಂ ಬ್ ಬೆದರಿಕೆ ಇರುವುದಾಗಿ ಪೈಲಟ್ ತಿಳಿಸಿದ್ದಾರೆ ಎಂದುಮೂಲಗಳು ತಿಳಿಸಿವೆ. ಬಾಂಬ್ ಬೆದರಿಕೆ ಬಂದ ಮೂಲದ ಬಗ್ಗೆ ಮಾಹಿತಿ ಕಲೆಹಾಕಲಾಗುತ್ತಿದೆ ಎಂದು ವಿಮಾನ ನಿಲ್ದಾಣದ ಅಧಿಕಾರಿಗಳು ತಿಳಿಸಿರುವುದಾಗಿ ವರದಿಯಾಗಿದೆ.