ಬೆಂಗಳೂರು, ಆ.22 (DaijiworldNews/AK) :ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ಜೈಲು ಪಾಲಾಗಿರೋ ನಟಿ ಪವಿತ್ರಾ ಗೌಡ ಕಳೆದ ಕೆಲವು ದಿನಗಳ ಹಿಂದೆ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು.
ಇಂದು ಅರ್ಜಿ ವಿಚಾರಣೆಗೆ ಬಂದಿತ್ತು. ಈ ಸಂದರ್ಭದಲ್ಲಿ ಜಾಮೀನು ನೀಡದಂತೆ ಪೊಲೀಸರ ಪರ ವಕೀಲರು ಆಕ್ಷೇಪಣೆ ಸಲ್ಲಿಸಿದರು. ನ್ಯಾಯಾಧೀಶ ಜೈಶಂಕರ್ ಜಾಮೀನು ಅರ್ಜಿಯನ್ನು ಆ.27ಕ್ಕೆ ಮುಂದೂಡಿದರು.
ಚಾರ್ಜ್ ಶೀಟ್ ಸಲ್ಲಿಸೋಕೆ ಇನ್ನೂ ಕೆಲವು ದಿನಗಳು ಬಾಕಿ ಇರೋ ಬೆನ್ನಲ್ಲೇ ಪವಿತ್ರಾ ಗೌಡ ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದು ಕುತೂಹಲಕ್ಕೆ ಕಾರಣವಾಗಿತ್ತು.ರೇಣುಕಾಸ್ವಾಮಿ ಕೊಲೆ ಕೇಸ್ ನಲ್ಲಿ ತನ್ನದೇನೂ ಪಾತ್ರವಿಲ್ಲ. ನನಗೆ ಮಸೇಜ್ ಬಂದಿದ್ದನ್ನು ದರ್ಶನ್ ಗೆ ತಿಳಿಸಿದ್ದೆ. ಆನಂತರ ಏನಾಯ್ತು ಅನ್ನೋದು ನನ್ನ ಗಮನಕ್ಕೆ ಬಂದಿಲ್ಲ ಅಂತ ಪವಿತ್ರಾ ಗೌಡಪರ ವಕೀಲರ ವಾದ ಮಾಡಲಿದ್ದಾರೆ ಮೂಲಗಳಿಂದ ತಿಳಿದು ಬಂದಿದೆ. ಅಲ್ಲದೇ ಮಹಿಳೆ ಅನ್ನೋ ಕಾರಣದಿಂದಾಗಿ ದರ್ಶನ್ ಗಿಂತ ಮೊದಲೇ ಪವಿತ್ರಾ ಗೌಡಗೆ ಜಾಮೀನು ಸಿಗಲಿದೆಯೇ ಕಾದು ನೋಡಬೇಕು.