ಬೆಂಗಳೂರು, ಆ.23(DaijiworldNews/AK): ಸರ್ಕಾರ ಬೀಳಿಸುವುದಕ್ಕೆ ಯಾರು ಯಾವ ಪ್ರಯತ್ನ ಮಾಡಿದರು ಆಗುವುದಿಲ್ಲ. ನಾವು ಸುಮ್ಮನೆ ಕೂರುವುದಿಲ್ಲ, ನಾವು ನಮ್ಮ ಕೆಲಸವನ್ನು ಮಾಡುತ್ತೇವೆ ಎಂದು ಡಿಸಿಎಂ ಡಿಕೆ ಶಿವಕುಮಾರ್ ತಿರುಗೇಟು ನೀಡಿದ್ದಾರೆ.
ದೆಹಲಿಗೆ ಹೊರಡುವ ಮುನ್ನ ಮಾಧ್ಯಮಕ್ಕೆ ಪ್ರತಿಕ್ರಿಯಿಸಿದ ಅವರು, ಯಾವ ರೀತಿ ನಮ್ಮ ಗವರ್ನರ್ ಕಚೇರಿ ದುರುಪಯೋಗ ಆಗಿದೆ ಎಂದು ಪ್ರಾಸಿಕ್ಯೂಷನ್ ಆದ ಮೇಲೆ ಎಲ್ಲವನ್ನೂ ಹೈಕಮಾಂಡ್ಗೆ ತಿಳಿಸಬೇಕು ಎಂದರು.
ಹದಿನೈದು ಬಿಲ್ಗಳನ್ನು ಗವರ್ನರ್ ವಾಪಸ್ ಕಳುಹಿಸಿದ್ದಾರೆ. ನಾನು ತಪ್ಪು ಮಾಡಿಲ್ಲ ಎಂದು ಸ್ಪಷ್ಟನೆ ಕೇಳಲಿ, ಹೇಳುವುದಿಲ್ಲ ಅಂದರೆ ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಸರ್ಕಾರಗಳು ಯಾಕೆ ಇರಬೇಕು? ಬಿಜೆಪಿ ನಾಯಕರು ಹೇಳಿದ ಕೂಡಲೇ ವಾಪಸ್ಸು ಕಳುಹಿಸಿಬಿಟ್ಟರೆ ಸರೀನಾ ಎಂದು ಪ್ರಶ್ನಿಸಿದರು.
ರಾಜ್ಯಪಾಲರಿಗೆ ದೇವರು ಒಳ್ಳೆಯ ಬುದ್ಧಿ ಕೊಡಲಿ ಎಂದು ದೇವರಲ್ಲಿ ಪ್ರಾರ್ಥನೆ ಮಾಡುತ್ತೇನೆ ಎಂದರು.