ಧಾರವಾಡ, ಆ.23(DaijiworldNews/AK): ರಾಜ್ಯ ಕಾಂಗ್ರೆಸ್ ಸರ್ಕಾರವು ಜಿಂದಾಲ್ ಕಂಪನಿಗೆ ಜಮೀನು ನೀಡುವುದಕ್ಕೆ ಅನುಮೋದನೆ ನೀಡಿರುವುದಷ್ಟೇ ಅಲ್ಲ,
ಬೆಂಗಳೂರಿನಲ್ಲಿ 15 ಸಾವಿರ ಕೋಟಿ ಮೊತ್ತದಲ್ಲಿ ಸುರಂಗಮಾರ್ಗ ನಿರ್ಮಾಣಕ್ಕೆ ನಿರ್ಧರಿಸಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ತುಂಬಾ ಆತುರದಲ್ಲಿ ಇದ್ದಾರೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ .ವಿಜಯೇಂದ್ರ ಕಿಡಿಕಾರಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾಂಗ್ರೆಸ್ ಹೈ ಕಮಾಂಡ್ ಸಿದ್ದರಾಮಯ್ಯ ಅವರ ರಾಜೀನಾಮೆ ಪಡೆಯಲು ತೀರ್ಮಾನಿಸಿದೆ ಎಂಬ ಮಾಹಿತಿ ಇದೆ. ಹೀಗಾಗಿ, ತರಾತುರಿಯಲ್ಲಿ ಈ ರೀತಿಯ ನಿರ್ಧಾರಗಳನ್ನು ಕೈಗೊಳ್ಳುತ್ತಿದ್ಧಾರೆ ಎಂದರು.
ಕರ್ನಾ ಟಕ ರಾಜ್ಯವನ್ನು ಕಾಂಗ್ರೆಸ್ ಪಕ್ಷದ ಎಟಿಎಂ ಆಗಿ ಪರಿವರ್ತಿಸುವ ದುರುದ್ದೇಶ. ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ನೂರಾರು ಕೋ ಟಿ, ಹಾಗೂ ಮುಡಾದಲ್ಲಿ ಸುಮಾರು ₹5 ಸಾವಿರ ಕೋ ಟಿಯ ಹಗರಣ ನಡೆದಿದೆ ಎಂದರು.