ಆಂಧ್ರಪ್ರದೇಶ, ಆ.26(DaijiworldNews/TA):ಹೈದರಾಬಾದ್ನ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಕಾಂಗ್ರೆಸ್ನ ಹಿರಿಯ ಸಂಸದ ವಸಂತ್ರಾವ್ ಚವಾಣ್ ಕೊನೆಯುಸಿರೆಳೆದಿದ್ದಾರೆ.
ಸೋಮವಾರ ಬೆಳಗಿನ ಜಾವ ಮೂರು ಗಂಟೆ ಸುಮಾರಿಗೆ ಸಾವನ್ನಪ್ಪಿದ್ದಾರೆ. ಕಳೆದ ಎರಡು ವಾರಗಳಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.ಇಂದು ಅವರು ಚಿಕಿತ್ಸೆ ಫಲಕಾರಿಯಾಗದೆ ನಿಧನರಾಗಿದ್ದಾರೆ.
ಚವಾಣ್, ಆರಂಭದಲ್ಲಿ ಯಕೃತ್ತಿನ ಸೋಂಕಿನಿಂದಾಗಿ ನಾಂದೇಡ್ನ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದರು. ಉಸಿರಾಟದ ಸಮಸ್ಯೆಯನ್ನೂ ಎದುರಿಸುತ್ತಿದ್ದರು. ಲೋ ಬಿಪಿ ಕೂಡ ಇತ್ತು ಎನ್ನಲಾಗಿದೆ.