ಬೆಂಗಳೂರು,ಆ.26(DaijiworldNews/AK): ಮುಡಾ ಪ್ರಕರಣದಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಬರೆದಿದ್ದ ಪತ್ರದಲ್ಲಿ ವೈಟ್ನರ್ ಹಚ್ಚಿದ್ದ ಜಾಗದಲ್ಲಿ ಏನಿತ್ತು ಎನ್ನುವುದರ ಬಗ್ಗೆ ಸಿಎಂ ವಿಡಿಯೊ ಹಂಚಿಕೊಂಡ ಬೆನ್ನಲ್ಲೇ ಕೇಂದ್ರ ಉಕ್ಕು ಮತ್ತು ಕೈಗಾರಿಕಾ ಸಚಿವ ಎಚ್.ಡಿ ಕುಮಾರಸ್ವಾಮಿ ತಿರುಗೇಟು ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಜಾಲತಾಣ ಎಕ್ಸ್ ಪೋಸ್ಟ್ ಹಂಚಿಕೊಂಡಿರುವ ಅವರು, ಮಾನ್ಯ ಸಿದ್ದರಾಮಯ್ಯನವರೇ , ವೈಟ್ನರ್ ಅಡಿಯಲ್ಲಿ ಅಡಗಿಸಿಟ್ಟಿದ್ದ ಅಕ್ಷರಗಳಿಗೆ ಟಾರ್ಚ್ ಹಾಕಿ ತಡಕಾಡುತ್ತಿರುವುದು ಈ ರಾಜ್ಯದ ಘನತೆವೆತ್ತ ಮುಖ್ಯಮಂ ತ್ರಿಗಳಿಗೆ ಶೋ ಭೆಯಲ್ಲ. ಇದು ಮೂಲ ದಾಖಲೆಯಾಗಿದ್ದು ಮುಡಾದಲ್ಲಿದೆ. ನಿಮ್ಮ ಬಳಿಗೆ ಹೇಗೆ ಬಂತು? ನಿಮಗೆ ಈ ದಾಖಲೆ ತಂದು ಕೊಟ್ಟ ಮಹಾಶಯರು ಯಾರು? ಇಷ್ಟಕ್ಕೂ ಈ ಮೂಲ ದಾಖಲೆ ಮುಡಾದಲ್ಲಿದೆಯಾ? ಅಥವಾ ನಿಮ್ಮ ಮನೆಯಲ್ಲಿದೆಯಾ? ಈಮೂಲ ದಾಖಲೆಗೆ ಟಾರ್ಚ್ ಹಾಕಿದವರು ಯಾರು? ನೀವಾ..? ಅಥವಾ ಇನ್ನಾರಾದರೂ ಇದ್ದಾರಾ? ಈ ದಾಖಲೆಯನ್ನೇ ಕೆ ನೀ ವು ಕೋ ರ್ಟ್ ಗೆ ಕೊಟ್ಟಿಲ್ಲ? ಎಂದು ಪ್ರಶ್ನೆಗಳ ಮೇಲೆ ಪ್ರಶ್ನೆಗಳನ್ನು ಹಾಕಿದ್ದಾರೆ.
ನೀವು ನ್ಯಾಯಾಲಯವನ್ನು ದಾರಿ ತಪ್ಪಿಸುತ್ತಿದ್ದೀರಿ. ಜನರನ್ನು ದಿಕ್ಕು ತಪ್ಪಿಸಿದ ಹಾಗೇ ನ್ಯಾಯಾಲಯಕ್ಕೂ ಸುಳ್ಳು ಮಾಹಿತಿ ಕೊಟ್ಟು ಅಲ್ಲಿಯೂ ಟಾರ್ಚ್
ಬಿಟ್ಟು ತೋರಿಸುತ್ತೀರಾ? ತಪ್ಪಿನ ಮೇಲೆ ತಪ್ಪು ಮಾಡುತ್ತಿದ್ದೀರಿ ಎಂದು ಸಿಎಂ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.