ಪಣಜಿ,ಆ.27(DaijiworldNews/AK): ರಾಜ್ಯದಲ್ಲಿ ಕಳೆದ ಆರು ತಿಂಗಳಲ್ಲಿ ಬೆಟ್ಟ ಕಡಿಯಲು ಯಾರಿಗೂ ಅನುಮತಿ ನೀಡಿಲ್ಲ. ಅಲ್ಲದೇ ಅಕ್ರಮ ಚಟುವಟಿಕೆಗಳನ್ನು ತಡೆಯುವ ನಿಟ್ಟಿನಲ್ಲಿ ನಿಯಮದಲ್ಲಿ ತಿದ್ದುಪಡಿ ತರಲು ಉದ್ದೇಶಿಸಲಾಗಿದ್ದು, 1 ಕೋಟಿ ವರೆಗೂ ದಂಡ ವಿಧಿಸಲು ಚಿಂತನೆ ನಡೆಸಿದೆ ಎಂದು ಗೋವಾದ ಸಚಿವ ವಿಶ್ವಜಿತ್ ರಾಣೆ ತಿಳಿಸಿದ್ದಾರೆ.
ವಯನಾಡ್ ಭೂಕುಸಿತ ದುರಂತದ ಬೆನ್ನಲ್ಲೇ ಪರಿಸರ ಸೂಕ್ಷ್ಮ ಪ್ರದೇಶಗಳಲ್ಲಿ ಬೆಟ್ಟ, ಗುಡ್ಡಗಳನ್ನು ಕಡಿಯುವುದನ್ನು ತಡೆಗಟ್ಟಲು ಗೋವಾ ಸರ್ಕಾರ ಕಟ್ಟುನಿಟ್ಟಿನ ಕ್ರಮಕ್ಕೆ ಮುಂದಾಗಿದೆ.
ಬೆಟ್ಟ ಕಡಿಯುವುದು ಅಗಲಿ, ಅಕ್ರಮ ಚಟುವಟಿಕೆಗಳ ಮೂಲಕ ನಿಯಮ ಉಲ್ಲಂಘಿಸಿದರೆ 1 ಲಕ್ಷದಿಂದ 1 ಕೋಟಿ ರೂ. ವರೆಗೂ ದಂಡ ವಿಧಿಸಲು ನಿಯಮದಲ್ಲಿ ತಿದ್ದುಪಡಿ ತರಲಾಗುವುದು' ಎಂದು ಅವರು ತಿಳಿಸಿದ್ದಾರೆ.