ಬೆಂಗಳೂರು, ಆ.31(DaijiworldNews/TA):ಮುಡಾ ಹಗರಣ ವಿಚಾರವಾಗಿ ಇಂದು ಕಾಂಗ್ರೆಸ್ ನಾಯಕರು ರಾಜಭವನ ಚಲೋ ನಡೆಸುತ್ತಿದ್ದಾರೆ. ಅನೇಕ ಕಾಂಗ್ರೆಸ್ ನಾಯಕರು ಇದರಲ್ಲಿ ಪಾಲ್ಗೊಂಡಿದ್ದಾರೆ.
ಮುಡಾ ಹಗರಣ ಸಿಎಂ ಸಿದ್ದರಾಮಯ್ಯರವರಿಗೆ ಕಂಟಕವಾಗಿ ಪರಿಣಮಿಸಿದೆ.ಈ ವಿಚಾರವಾಗಿ ರಾಜ್ಯ ರಾಜಕಾರಣದಲ್ಲಿ ಅನೇಕ ಚರ್ಚೆಗಳು ಮುಂದುವರಿಯುತ್ತಲೇ ಇದೆ. ಇನ್ನು ಇದಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ವಿರುದ್ಧ ತನಿಖೆಗಾಗಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಇದನ್ನು ಖಂಡಿಸಿ ಕಾಂಗ್ರೆಸ್ ನಾಯಕರು ಇಂದು ರಾಜಭವನ ಚಲೋ ಕಾರ್ಯಕ್ರಮಕ್ಕೆ ಕರೆ ನೀಡಿದ್ದಾರೆ.
ಕೇಂದ್ರ ಸಚಿವ ಹೆಚ್.ಡಿ.ಕುಮಾರಸ್ವಾಮಿ, ಮಾಜಿ ಸಚಿವರಾದ ಜನಾರ್ದನ ರೆಡ್ಡಿ, ಮುರಗೇಶ್ ನಿರಾಣಿ ವಿರುದ್ಧ ಪ್ರಾಸಿಕ್ಯೂಷನ್ಗೆ ಅನುಮತಿ ನೀಡುವಂತೆ ಒತ್ತಾಯಿಸಿ ಕಾಂಗ್ರೆಸ್ ನಾಯಕರು ಇಂದು ರಾಜಭವನ ಚಲೋ ಗೆ ಕರೆ ನೀಡಿದ್ದಾರೆ. ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ರಾಜಭವನ ಚಲೋ ನಡೆಯುತ್ತಿದೆ.