ಬೆಂಗಳೂರು, ಆ.31(DaijiworldNews/AK): ಕೇಂದ್ರ ಸಚಿವ ಎಚ್.ಡಿ. ಕುಮಾರಸ್ವಾಮಿ,ಮಾಜಿ ಸಚಿವ ಮುರುಗೇ ಶ್ ನಿರಾಣಿ, ಶಾಸಕರಾದ ಶಶಿಕಲಾ ಜೊಲ್ಲೆ ಮತ್ತು ಜನಾರ್ದನ ರೆಡ್ಡಿ ಮೇಲಿನ ಪ್ರಕರಣದಲ್ಲೂ ಪ್ರಾಸಿಕ್ಯೂಷನ್ ಅನುಮತಿ ನೀ ಡುವಂತೆ ಆಗ್ರಹಿಸಿ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರಿಗೆ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ನೇತೃತ್ವದ ನಿಯೋಗ ಶನಿವಾರ ಮನವಿ ಸಲ್ಲಿಸಿತು.
ವಿಧಾನಸೌಧದ ಗಾಂಧಿ ಪ್ರತಿಮೆಯ ಬಳಿಯಿಂದ ರಾಜಭವನದವರೆಗೆ ಡಿ.ಕೆ. ಶಿವಕುಮಾರ್ ನೇತೃತ್ವದಲ್ಲಿ ಸಚಿವರು, ಶಾಸಕರು, ಕಾಂಗ್ರೆಸ್ ಮುಖಂಡರು ಕಾಲ್ನಡಿಗೆಯಲ್ಲಿ ತೆರಳಿದರು.
ಮುಡಾ ನಿವೇಶನ ಹಂಚಿಕೆ ಪ್ರಕರಣದಲ್ಲಿ ಮುಖ್ಯಮಂತ್ರಿ ವಿರುದ್ಧ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಹಿನ್ನೆಲೆಯಲ್ಲಿ, ಬಿಜೆಪಿ, ಜೆಡಿಎಸ್ ನಾಯಕರ ಮೇಲಿನ ಪ್ರಕರಣಗಳಲ್ಲೂ ವಿಚಾರಣೆಗೆ ಅನುಮತಿ ನೀ ಡುವಂತೆ ರಾಜ್ಯಪಾಲರಿಗೆ ನೀ ಡಿದ ಮನವಿಯಲ್ಲಿ ಕಾಂಗ್ರೆಸ್ ಒತ್ತಾಯಿಸಿದೆ.
ರಾಜ್ಯಪಾಲರಿಗೆ ಮನವಿ ಸಲ್ಲಿಸಿದ ಬಳಿಕ ಮಾತನಾಡಿದ ಡಿ.ಕೆ. ಶಿವಕುಮಾರ್, ಯಾರೊ ದೂರು ಕೊಟ್ಟರೆಂದು ಮುಖ್ಯಮಂತ್ರಿ ವಿರುದ್ದ ತನಿಖೆಗೆ ರಾಜ್ಯಪಾಲರು ಅನುಮತಿ ಕೊಟ್ಟಿದ್ದಾರೆ. ಆದರೆ, ಬಿಜೆಪಿ-ಜೆಡಿಎಸ್ ನಾಯಕರ ವಿರುದ್ದ ಪ್ರಾಸಿಕ್ಯೂಷನ್ ಅವರು ಅನುಮತಿ ಕೊಡುತ್ತಿಲ್ಲ. ರಾಜಭವನ ರಾಜಕೀಯ ಭವನ ಆಗಬಾರದು. ಸಂವಿಧಾನದಡಿ ರಚನೆಯಾದ ಪೀಠ ರಾಜ್ಯಪಾಲರದ್ದು. ಇಂತಹ ರಾಜ್ಯಪಾಲರಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಬಾರದು. ನ್ಯಾಯಸಮ್ಮತವಾಗಿ ಈ ನಾಲ್ವರ ವಿರುದ್ಧ ಪ್ರಾಸಿಕ್ಯೂಷನ್ ಕೊಡಿ ಎಂ ದು ಮನವಿಮಾಡಿದ್ದೇವೆ ಎಂದರು.
ಎಚ್.ಡಿ. ಕುಮಾರಸ್ವಾಮಿ, ಜನಾರ್ದನ ರೆಡ್ಡಿ, ಶಶಿಕಲಾ ಜೊಲ್ಲೆ, ನಿರಾಣಿ ಮೇ ಲಿನ ಪ್ರಾಸಿಕ್ಯೂಷನ್ ಅರ್ಜಿ ಸಂಬಂ ಧ ನಮ್ಮ ಬಳಿ ಏನೂ ಇಲ್ಲ. ಎಲ್ಲ ವಿಲೇವಾರಿ ಮಾಡಿದ್ದೇವೆಂದು ರಾಜ್ಯಪಾಲರು ಹೇಳಿದರು ಎಂದು ತಿಳಿಸಿದರು.