ಹುಬ್ಬಳ್ಳಿ,ಆ.31(DaijiworldNews/AK):ಕಾಂಗ್ರೆಸ್ ಪಕ್ಷದವರು ರಾಜಭವನ ಚಲೋ ಅಲ್ಲ. ಮುಡಾ ಚಲೋ ನಡೆಸಲಿ ಎಂದು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ವ್ಯಂಗ್ಯವಾಗಿದ್ದಾರೆ.
ಇಂದು ಮಾದ್ಯಮದವರೊಂದಿಗೆ ಮಾತನಾಡಿ, ಸಿಎಂ, ಡಿಸಿಎಂ ಸೇರಿದಂತೆ ಕಾಂಗ್ರೆಸ್ ನವರು ರಾಜಭವ ನ ಚಲೋ ಮಾಡುವ ಬದಲು ತಪ್ಪಿಗೆ ಕ್ಷಮೆ ಕೇಳಲು ಮುಡಾ ಚಲೋ ಮಾಡಲಿ ಎಂದರು.
ಮೂಡಾಕ್ಕೆ ತೆರಳಿ ನಿವೇಶನ ತೆಗೆದುಕೊಂಡದ್ದು, ಆಪ್ತರಿಗೆ ಕೊಡಿಸಿದ್ದು ತಪ್ಪಾಯಿತು ಎಂದು ಮುಡಾಕ್ಕೆ ಕೈ ಮುಗಿದು ಕ್ಷಮೆ ಕೇಳಿ ಬರಲಿ ಎಂದು ಹೇಳಿದರು.
ಮುಡಾ ಹಗರಣದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತನಿಖೆಗೇಕೆ ಹೆದರುತ್ತಾರೆ? ಅರ್ಥವಾಗುತ್ತಿಲ್ಲ ಎಂದು ಹೇಳಿದರು. ಹಿಂದೆ ಸಿಎಂ ಆಗಿದ್ದ ಬಿ.ಎಸ್.ಯಡಿಯೂರಪ್ಪ ಅವರ ಮೇಲೂ ಖಾಸಗಿ ದೂರಿನ ಮೇರೆಗೆ ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿದ್ದರು. ಅವರು ಸಿಎಂ ಸ್ಥಾನಕ್ಕೆ ರಾಜೀನಾಮೆ ನೀಡಿ ತನಿಖೆ ಎದುರಿಸಲಿಲ್ಲವೇ? ಬಿಎಸ್ ವೈ ಶುದ್ಧ ಹಸ್ತರಾಗಿ ಬಂದ ಮೇಲೆ ಸಿದ್ದರಾಮಯ್ಯ ಕ್ಷಮೆ ಕೇಳಿದ್ದರಾ ಎಂದು ಜೋಶಿ ಪ್ರಶ್ನಿಸಿದರು