ಬೆಂಗಳೂರು, ಆ.31(DaijiworldNews/AK): ರೇಣುಕಾಸ್ವಾಮಿ ಕೊಲೆ ಕೇಸ್ನಲ್ಲಿ ಜಾಮೀನು ಕೋರಿ ಎ1 ಆರೋಪಿ ಪವಿತ್ರಾ ಗೌಡ ಹಾಗೂ ಎ7 ಆರೋಪಿ ಅನುಕುಮಾರ್ ಸಲ್ಲಿಸಿದ್ದ ಅರ್ಜಿಯನ್ನು 57ನೇ ಸಿಸಿಹೆಚ್ ನ್ಯಾಯಾಲಯ ಶನಿವಾರ ವಜಾಗೊಳಿಸಿದೆ.
ಪವಿತ್ರಾಗೌಡ ಪರ ಟಾಮಿ ಸೆಬಾಸ್ಟಿಯನ್, ಅನುಕುಮಾರ್ ಪರವಾಗಿ ಹಿರಿಯ ವಕೀಲ ರಾಮಸಿಂಗ್ ವಾದ ಮಂಡಿಸಿದ್ದರು. ವಾದ ಪ್ರತಿವಾದಗಳನ್ನು ಆಲಿಸಿದ ಕೋರ್ಟ್ ಇಬ್ಬರ ಅರ್ಜಿಯನ್ನು ವಜಾಗೊಳಿಸಿ ತೀರ್ಪು ಪ್ರಕಟಿಸಿದೆ.
ಇದೇ ಆಗಸ್ಟ್ 19ರಂದು ಪವಿತ್ರಾಗೌಡ ಪರ ವಕೀಲರು ಜಾಮೀನು ಕೋರಿ ಅರ್ಜಿ ಸಲ್ಲಿಸಿದ್ದರು. ಈ ಸಂಬಂಧ ಆ.28 ರಂದು ವಿಚಾರಣೆ ನಡೆಸಿದ್ದ ಸಿಟಿ ಸಿವಿಲ್ ಮತ್ತು ಸೆಷನ್ಸ್ ಕೋರ್ಟ್ ಅರ್ಜಿ ವಿಚಾರಣೆಯನ್ನು ಆ.31ಕ್ಕೆ ಮುಂದೂಡಿತ್ತು. ಶನಿವಾರ ಮತ್ತೆ ಅರ್ಜಿ ವಿಚಾರಣೆ ನಡೆಸಿದ ಕೋರ್ಟ್ ಜಾಮೀನು ನಿರಾಕರಿಸಿತು.