ಹೊಳೆನರಸೀಪುರ, ಆ.31(DaijiworldNews/AK): ಕರ್ನಾಟಕ ರಾಜ್ಯದಲ್ಲಿ ನಡೆಯುತ್ತಿರುವ ರಾಜಕೀ ಯ ವಿದ್ಯಮಾನಗಳ ಬಗ್ಗೆ ಸಮಯ ಬಂದಾಗ ಮಾತನಾಡುತ್ತೇನೆ. ಹಾಸನಕ್ಕೆ ಬರುತ್ತೇನೆ ಎಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಹೇಳಿದರು.
ಇದೇ ವೇಳೆ ಜಮ್ಮ ಕಾಶ್ಮೀರಕ್ಕೆ ಭೇಟಿ ನೀಡಿದ ಬಗ್ಗೆ ಮಾತನಾಡಿ, ಜಮ್ಮು ಕಾಶ್ಮೀ ರದಲ್ಲಿ 370ನೇ ವಿಧಿ ರದ್ದುಪಡಿಸಿದ ಬಳಿಕ, ಉಗ್ರಗಾಮಿಗಳ ಅಟ್ಟಹಾಸ ಕಡಿಮೆಯಾಗಿದ್ದು, ಜನಸಾಮಾನ್ಯರು ನೆಮ್ಮದಿಯಿಂದ ಓಡಾಡುತ್ತಿದ್ದಾರೆ ಎಂದು ಹೇಳಿದರು.
ಈಗ ಅಲ್ಲಿ ಚುನಾವಣೆ ನಡೆಯುತ್ತಿದ್ದು, ಜನರು ಯಾರಿಗೆ ಮತ ಹಾಕುತ್ತಾರೆಯೋ ಬಿಡುತ್ತಾರೆಯೋ ಗೊತ್ತಿಲ್ಲ. ಪ್ರಧಾನಿ ಮೋ ದಿ ಒಳ್ಳೆಯ ಕೆಲಸ ಮಾಡಿದ್ದು, ಜನ ನೆಮ್ಮದಿಯಿಂದ ಮತ ಚಲಾಯಿಸುತ್ತಾರೆ ಎಂದು ಹೇಳಿದರು. ಜಮ್ಮು ಕಾಶ್ಮೀ ರಕ್ಕೆ ಹೆಚ್ಚು ಪ್ರವಾಸಿಗರು ಬರುತ್ತಿದ್ದಾರೆ ಎಂದರು.
ಕಾಶ್ಮೀ ರದಲ್ಲಿರುವ ಶಿವನ ದೇವಾಲಯಕ್ಕೆ 230 ಮೆಟ್ಟಿಲು ಇವೆ. ನಾನು 30 ಮೆಟ್ಟಿಲುಗಳನ್ನು ಹತ್ತಿದೆ. ಬಳಿಕ ಸಿಆರ್ಪಿ ಯೋಧರು ದೇವಾಲಯಕ್ಕೆ ಕರೆದುಕೊಂಡು ಹೋದರು ಎಂದರು.