ಬೆಂಗಳೂರು, ಆ.31(DaijiworldNews/AK): ಬಿಜೆಪಿ ಸರ್ಕಾರದ ಅವಧಿಯಲ್ಲಿ ನಡೆದ ಕೊವಿಡ್ ಹಗರಣ ಆರೋಪ ವಿಚಾರವಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಜಸ್ಟೀಸ್ ಜಾನ್ ಮೈಕಲ್ ಡಿ. ಕುನ್ಹಾ ನೇತೃತ್ವದ ಆಯೋಗದಿಂದ ಸಿಎಂ ಕಾವೇರಿ ನಿವಾಸದಲ್ಲಿ ವರದಿ ಸಲ್ಲಿಕೆ ಮಾಡಲಾಗಿದೆ.
ಬಿಜೆಪಿ ಅವಧಿಯಲ್ಲಿ ಆರೋಗ್ಯ ಸಚಿವರಾಗಿದ್ದ ಡಾ.ಕೆ.ಸುಧಾಕರ್ ವಿರುದ್ಧ ಅಕ್ರಮ ನಡೆಸಿರುವ ಗಂಭೀರ ಆರೋಪ ಮಾಡಲಾಗಿದೆ.ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಪೊನ್ನಣ್ಣ, ಸಚಿವ ಪ್ರಿಯಾಂಕ್ ಖರ್ಗೆ, ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ ಗೋವಿಂದರಾಜು ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು.