ಬೆಂಗಳೂರು, ಸೆ.02 (DaijiworldNews/AK): ಸಿದ್ದಸಿರಿ ಸೌಹಾರ್ದ ಸಹಕಾರ ನಿಯಮಿತ ವಿರುದ್ಧ ದಾಖಲಾಗಿದ್ದ ಕೇಸ್ನ್ನು ಸುದಿರ್ಘ ಸಮಯದ ವರೆಗೆ ವಿಚಾರಣೆ ನಡೆಸಿ ಹೈಕೋರ್ಟ್ ರದ್ದುಗೊಳಿಸಿದೆ. ಈ ಮೂಲಕ ಸಂಸ್ಥೆಯ ಅಧ್ಯಕ್ಷ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಸೇರಿದಂತೆ ರಮಣಗೌಡ ಪಾಟೀಲ್, ಶಿವಕುಮಾರ್ ಪಾಟೀಲ್ಗೂ ರಿಲೀಫ್ ಸಿಕ್ಕಿದೆ.
ಮಾಲಿನ್ಯ ನಿಯಂತ್ರಣ ಮಂಡಳಿ ಈ ಹಿಂದೆ ಚಿಂಚೋಳಿ ಜೆಎಂಎಫ್ಸಿ ಕೋರ್ಟ್ ನಲ್ಲಿ ದೂರು ದಾಖಲಿಸಲಾಗಿತ್ತು .ವಾಯು, ಜಲ ಕಾಯ್ದೆ ಉಲ್ಲಂಘನೆ ಆರೋಪ ಹಿನ್ನಲೆ ಚಿಂಚೋಳಿ ತಾಲೂಕಿನ ಚಿಮ್ಮಾಯಿದಲಾಯಿ ಗ್ರಾಮದ ಬಳಿ ಇರುವ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಒಡೆತನದ ಸಿದ್ದ ಶ್ರೀ ಸಕ್ಕರೆ ಕಾರ್ಖಾನೆಗೆ ಬೀಗ ಹಾಕಲು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿ ಆದೇಶ ಹೊರಡಿಸಿತ್ತು.
ಈ ಆದೇಶ ಪ್ರಶ್ನಿಸಿ ಬಿಜೆಪಿ ಶಾಸಕ ಯತ್ನಾಳ್ ಹೈಕೋರ್ಟ್ ಮೆಟ್ಟಿಲೇರಿದ್ದರು. ಅದರಂತೆ 2024 ಜನವರಿ 29 ರಂದು ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯ ಆದೇಶಕ್ಕೆ ತಡೆ ನೀಡಿತ್ತು.ಇದೀಗ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಗೆ ಹೈಕೋರ್ಟ್ ಬಿಗ್ ರಿಲೀಫ್ ನೀಡಿದೆ.