ನವದೆಹಲಿ,, ಸೆ.04 (DaijiworldNews/AK): ಕರ್ನಾಟಕದ ಕಾಂಗ್ರೆಸ್ ಸರ್ಕಾರದ ಭ್ರಷ್ಟಾಚಾರದ ವಿರುದ್ಧ ಬಿಜೆಪಿ ಮತ್ತೊಂದು ಪಾದಯಾತ್ರೆ ನಡೆಸುವ ಮೂಲಕ ಹೋರಾಟವನ್ನು ಮತ್ತಷ್ಟು ತೀವ್ರಗೊಳಿಸಲು ನಿರ್ಧರಿಸಿದೆ ಎಂದು ಕೇಂದ್ರ ಆಹಾರ ಸಚಿವ ಪ್ರಲ್ಹಾದ ಜೋಶಿ ಹೇಳಿದರು.
ಮುಡಾ ಹಗರಣ ವಿರೋಧಿಸಿ ಬಿಜೆಪಿ ಹಾಗೂ ಜೆಡಿಎಸ್ ನಾಯಕರು ಬೆಂಗಳೂರಿನಿಂದ ಮೈಸೂರಿನವರೆಗೆ ಪಾದಯಾತ್ರೆ ನಡೆಸಿದ್ದರು. ಬಸನಗೌಡ ಪಾಟೀಲ ಯತ್ನಾಳ ನೇತೃತ್ವದ ವಿರೋಧಿ ಬಣ ಮೈಸೂರು ಚಲೋ ಕಡೆ ಮುಖ ಮಾಡಿರಲಿಲ್ಲ. ಅಲ್ಲದೇ ಡಿ.ಕೆ.ಶಿವಕುಮಾರ್ ಅವರನ್ನು ಮುಖ್ಯಮಂ ತ್ರಿ ಮಾಡುವ ಉದ್ದೇ ಶದ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ’ ಎಂದು ಯತ್ನಾಳ ಲೇವಡಿ ಮಾಡಿದರು.
ಬಳಿಕ ಬೆಳಗಾವಿಯ ರೆಸಾರ್ಟ್ ನಲ್ಲಿ ಬಿಜೆಪಿಯ ಅತೃಪ್ತ ನಾಯಕರು ಸಭೆ ನಡೆಸಿದ್ದರು. ವಾಲ್ಮೀ ಕಿ ಅಭಿವೃದ್ಧಿ ನಿಗಮದ ಭ್ರಷ್ಟಾಚಾರ ಖಂಡಿಸಿ ಕೂಡಲಸಂಗಮದಿಂದ ಬಳ್ಳಾರಿಯ ವರೆಗೆ ಪಾದಯಾತ್ರೆ ಮಾಡಲು ತೀ ರ್ಮಾನಿಸಿದ್ದರು.ಬುಧವಾರ ಸುದ್ದಿಗಾರರ ಜತೆಗೆಮಾತನಾಡಿದ ಜೋಶಿ, ವಾಲ್ಮೀ ಕಿ ಹಗರಣ, ಮುಡಾ ಹಗರಣದ ವಿರುದ್ಧ ಬಿಜೆಪಿ ಹೋರಾಟ ನಿಲ್ಲದು ಎಂದರು.
‘