ಬೆಂಗಳೂರು, ಸೆ.05 (DaijiworldNews/AK): ಶಿಕ್ಷಕರ ದಿನಾಚರಣೆ ಅಂಗವಾಗಿ ರಾಜ್ಯ ಸರ್ಕಾರ ಉತ್ತಮ ಶಿಕ್ಷಕ ಪ್ರಶಸ್ತಿಯನ್ನು ಇಂದು ಪ್ರದಾನ ಮಾಡಿದೆ. ಆದರೆ ಕುಂದಾಪುರ ಸರ್ಕಾರಿ ಪದವಿ ಪೂರ್ವ ಕಾಲೇಜು, ಪ್ರಾಂಶುಪಾಲರಾದ ರಾಮಕೃಷ್ಣ ಜಿಬಿ ಅವರಿಗೂ ಪ್ರಶಸ್ತಿ ಘೋಷಣೆ ಮಾಡಲಾಗಿತ್ತು. ಆದರೆ, ಹಿಜಾಬ್ ವಿವಾದದ ವೇಳೆ ವಿದ್ಯಾರ್ಥಿನಿಯರನ್ನು ಗೇಟ್ನಲ್ಲಿಯೇ ತಡೆದಿದ್ದು ಇವರೇ ಎನ್ನುವುದು ಗೊತ್ತಾಗುತ್ತಿದ್ದಂತೆ ರಾಜ್ಯ ಸರ್ಕಾರ ಇವರಿಗೆ ಘೋಷಣೆ ಮಾಡಿದ್ದ ಪ್ರಶಸ್ತಿಯನ್ನು ತಡೆಹಿಡಿದಿದೆ.
ಇತ್ತ ಈ ಕುರಿತು ಶಿಕ್ಷಣ ಸಚಿವ ಮಧು ಬಂಗಾರಪ್ಪ ಪ್ರತಿಕ್ರಿಯಿಸಿದ್ದು, ಈ ಹಿಂದಿನ ಸರ್ಕಾರ ಆದೇಶ ಮಾಡಿದಾಗ ಪ್ರಿನ್ಸಿಪಾಲ್ ವರ್ತನೆ ಸರಿಯಿರಲಿಲ್ಲ. ಹೀಗಾಗಿ ಪ್ರಶಸ್ತಿ ತಡೆಹಿಡಿಯಲಾಗಿದೆ. ಪ್ರಶಸ್ತಿ ರದ್ದುಪಡಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ವಿದ್ಯಾರ್ಥಿಗಳ ಜೊತೆ ಪ್ರಿನ್ಸಿಪಾಲ್ ರಾಮಕೃಷ್ಣ ವರ್ತನೆ ಸರಿಯಿರಲಿಲ್ಲ. ಈ ಬಗ್ಗೆ ಮತ್ತೆ ಪರಿಶೀಲನೆ ಮಾಡಿ ವರದಿ ನೀಡುತ್ತಾರೆ. ಆ ಭಾಗದಲ್ಲಿ ರಾಜಕಾರಣ ಮಾಡುತ್ತಾರೆ. ಅದು ಮಾಡೋದು ಬೇಡ ಎಂದು ಬಿಜೆಪಿಗೆ ತಿರುಗೇಟು ನೀಡಿದ್ದಾರೆ. ಇನ್ನು ಸರ್ಕಾರ ಗೊಂದಲ ನಡೆ ಬಗ್ಗೆ ಬಿಜೆಪಿ ನಾಯಕರು, ಹಿಂದು ಸಂಘಟನೆಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ.