ಬೆಂಗಳೂರು, ಸೆ.6(DaijiworldNews/AK):ವೈದ್ಯಕೀಯ, ಇಂಜಿನಿಯರಿಂಗ್ ಸೇರಿದಂತೆ ಇತರ ವೃತ್ತಿಪರ ಕೋರ್ಸ್ಗಳ ಪ್ರವೇಶಕ್ಕೆ ಎರಡನೇ ಸುತ್ತಿನ ಸೀಟು ಹಂಚಿಕೆ ಪ್ರಕ್ರಿಯೆಯನ್ನು ಸೆ.8ರಿಂದ ಆರಂಭಿಸಲಾಗುವುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (KEA) ಕಾರ್ಯನಿರ್ವಾಹಕ ನಿರ್ದೇಶಕ ಹೆಚ್.ಪ್ರಸನ್ನ ತಿಳಿಸಿದ್ದಾರೆ.
ಸೆ.8 ಬೆಳಿಗ್ಗೆ 11ಕ್ಕೆ ಹಂಚಿಕೆಗೆ ಲಭ್ಯ ಇರುವ ಸೀಟುಗಳ ವಿವರವನ್ನು ಪ್ರಕಟಿಸಲಾಗುತ್ತದೆ. ಮಧ್ಯಾಹ್ನ 2ರಿಂದ ಸೆ.11ರವರೆಗೆ ಆಯ್ಕೆಗಳನ್ನು ಬದಲಿಸಿಕೊಳ್ಳಲು ಅವಕಾಶ ಇರುತ್ತದೆ. ರಾಷ್ಟೀಯ ಮಟ್ಟದ ನೀಟ್ ಫಲಿತಾಂಶ ನೋಡಿಕೊಂಡು ಎರಡನೇ ಸುತ್ತಿನ ಫಲಿತಾಂಶ ದಿನಾಂಕವನ್ನು ನಂತರ ತಿಳಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ನೀಟ್ಗೆ ಸಂಬಂಧಿಸಿದಂತೆ ಎರಡನೇ ಸುತ್ತಿನ ಸೀಟು ಹಂಚಿಕೆ ಫಲಿತಾಂಶ ಪ್ರಕಟಣೆ ನಂತರ ಅಭ್ಯರ್ಥಿಗಳಿಗೆ ಯಾವುದೇ ಛಾಯ್ಸ್ಗಳನ್ನ ಆಯ್ಕೆ ಮಾಡಲು ಅವಕಾಶ ಇರುವುದಿಲ್ಲ. ಈ ಹಂತದಲ್ಲಿ ಹಂಚಿಕೆಯಾದ ಸೀಟಿಗೆ ಪ್ರವೇಶ ಪಡೆಯುವುದು ಕಡ್ಡಾಯವಾಗಿರುತ್ತದೆ. ಒಂದು ವೇಳೆ ಶುಲ್ಕ ಪಾವತಿಸಿ, ಕಾಲೇಜಿಗೆ ಪ್ರವೇಶ ಪಡೆಯದಿದ್ದರೆ ಅಂತಹವರು ಕಾನೂನು ಕ್ರಮ ಎದುರಿಸಬೇಕಾಗುತ್ತದೆ. ಹೀಗಾಗಿ ಅಭ್ಯರ್ಥಿಗಳು ಇಷ್ಟ ಇರುವ ಕಾಲೇಜುಗಳನ್ನು ಮಾತ್ರ ದಾಖಲಿಸಬೇಕು ಎಂದು ಅವರು ಸಲಹೆ ನೀಡಿದ್ದಾರೆ.