ವಿಜಯಪುರ,ಸೆ.8(DaijiworldNews/AK): ಆರ್ಎಸ್ಎಸ್ ಮುಖೇನ ಮತ್ತೆ ಬಿಜೆಪಿ ಸೇರುವ ಅವಶ್ಯಕತೆ ನನಗಿಲ್ಲ. ನಾನೂ ಆರ್ಎಸ್ಎಸ್ನವನೇ ಎಂದು ಮಾಜಿ ಡಿಸಿಎಂ ಕೆ.ಎಸ್.ಈಶ್ವರಪ್ಪ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ಬಿಜೆಪಿ, ಯಡಿಯೂರಪ್ಪ ನಡೆ ಬಗ್ಗೆ ಅಸಮಾಧನ ವ್ಯಕ್ತಪಡಿಸಿದರು. ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಎಲ್ಲಿಯವರೆಗೆ ಇರಬೇಕು. ರಾಯಣ್ಣ ಬ್ರಿಗೇಡ್ ನಿಲ್ಲಿಸುವಂತೆ ಬಿಎಸ್ ಯಡಿಯೂರಪ್ಪ ಅಮಿತ್ ಶಾಗೆ ಹೇಳಿದ್ದರು. ಅಮಿತ್ ಶಾ ಹೇಳಿದ್ದಕ್ಕೆ ನಿಷ್ಠಾವಂತ ಕಾರ್ಯಕರ್ತನಾಗಿ ಬ್ರಿಗೇಡ್ ನಿಲ್ಲಿಸಿದ್ದೆ. ಇಂಧನ ಸಚಿವನಾಗಿದ್ದಾಗ ರಾಜಿನಾಮೆ ಕೊಟ್ಟು ರಾಜ್ಯಾಧ್ಯಕ್ಷನಾಗು ಅಂದರು. ಇಂಧನ ಖಾತೆಯ ಸಚಿವ ಸ್ಥಾನ ಬಿಟ್ಟು ಬಿಜೆಪಿ ರಾಜ್ಯಾಧ್ಯಕ್ಷನಾದೆ. ಅಲ್ಲದೇ ವಿಧಾನಸಭಾ, ಲೋಕಸಭಾ ಚುನಾವಣೆಯಲ್ಲೂ ನನಗೆ ಮೋಸ ಮಾಡಿದರು ಎಂದು ಬೇಸರ ವ್ಯಕ್ತಪಡಿಸಿದರು.
ರಾಜ್ಯ ಬಿಜೆಪಿಯಲ್ಲಿ ಕುಟುಂಬ ರಾಜಕಾರಣ ಎಲ್ಲಿಯವರೆಗೆ ಇರಬೇಕು. ಅಪ್ಪ, ಮಕ್ಕಳ ಕೈಯಲ್ಲಿ ಇರಬೇಕಾ ಎಂದು ಪ್ರಶ್ನಿಸಿದ್ದಾರೆ.