ಬೆಂಗಳೂರು, ಸೆ.10(DaijiworldNews/AA): ಸಿಎಂ ಸ್ಥಾನ ಖಾಲಿ ಇಲ್ಲ. ಖಾಲಿಯಿರದ ಸಿಎಂ ಸ್ಥಾನದ ಬಗ್ಗೆ ಚರ್ಚೆ ಅಪ್ರಸ್ತುತ ಎಂದು ಕುಣಿಗಲ್ ಶಾಸಕ ರಂಗನಾಥ್ ಸ್ವಪಕ್ಷದವರ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ವಿಧಾನಸೌಧದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಂಎಲ್ಎಗಳ ಪತ್ರಕ್ಕೆ ನನ್ನ ಸಹಮತ ಇದೆ. ನನ್ನ ದೃಷ್ಟಿಯಲ್ಲಿ ರಾಜ್ಯದ ಸಮಸ್ಯೆ ನಿವಾರಣೆಗೆ ನಾವೆಲ್ಲ ಕೆಲಸ ಮಾಡಬೇಕು. ಸಿಎಂ ಬದಲಾವಣೆ ವಿಚಾರ ಮಾತಾನಾಡೋದು ಅಪ್ರಸ್ತುತ. ಸಿದ್ದರಾಮಯ್ಯ ಅವರು ಉತ್ತಮವಾಗಿ ಕೆಲಸ ಮಾಡ್ತಿದ್ದಾರೆ. ಸದ್ಯ ಸಿಎಂ ಸ್ಥಾನ ಖಾಲಿ ಇಲ್ಲ. ಆ ಬಗ್ಗೆ ಚರ್ಚೆ ಸರಿಯಲ್ಲ ಎಂದು ಹೇಳಿದರು.
ರಾಮೇಶ್ವರಂ ಕೆಫೆ ಸ್ಫೋಟ ಕೇಂದ್ರ ಸರ್ಕಾರದ ವೈಫಲ್ಯ ಅಲ್ವಾ? ಎನ್ಐಎ ಜಾರ್ಜ್ ಶೀಟ್ ನೋಡಿದರೆ ಭಾರತ ಸರ್ಕಾರ ಸರಿಯಾಗಿ ಕೆಲಸ ಮಾಡುತ್ತಿಲ್ಲ ಎಂದಾಯಿತು. ಇದು ಕೇಂದ್ರ ಸರ್ಕಾರದ ವೈಫಲ್ಯ ಆಗಿದೆ ಎಂದರು.
ಎನ್ಐಎ ಕೇಂದ್ರದ ಅಧೀನದಲ್ಲಿ ಬರುತ್ತೆ. ಹಾಗಾದರೆ ಅವರಿಗೆ ಜವಾಬ್ದಾರಿ ಇರಲಿಲ್ಲವಾ? ಸುಮ್ಮನೆ ಆರೋಪ ಮಾಡುವುದು ಸರಿಯಲ್ಲ. ಮುಂದೆ ಇಂತಹ ಘಟನೆ ಆಗದಂತೆ ನಾವೆಲ್ಲ ಒಟ್ಟಾಗಿ ಕೆಲಸ ಮಾಡಬೇಕು ಎಂದು ಆಕ್ರೋಶ ವ್ಯಕ್ತಪಡಿಸಿದರು.