ನವದೆಹಲಿ, ಸೆ.10(DaijiworldNews/AA): ನಿನ್ನೆ ರಾತ್ರಿ ಕೇದಾರನಾಥ ಯಾತ್ರಿಕರ ಮೇಲೆ ಸಂಭವಿಸಿದ ಭಾರೀ ಭೂಕುಸಿತ ಘಟನೆಯಲ್ಲಿ ಸಾವಿನ ಸಂಖ್ಯೆ 5ಕ್ಕೆ ಏರಿದೆ. ಇಂದು ಬೆಳಗ್ಗೆ ರಾಜ್ಯ ವಿಪತ್ತು ನಿರ್ವಹಣಾ ಪಡೆಯು ನಾಲ್ವರ ಮೃತದೇಹಗಳನ್ನು ಹೊರತೆಗೆದಿದ್ದು, ನಿನ್ನೆ ರಾತ್ರಿ ಒಂದು ಮೃತದೇಹ ಪತ್ತೆಯಾಗಿತ್ತು.
ಜಿಲ್ಲಾಡಳಿತ ರಕ್ಷಣಾ ಕಾರ್ಯಾಚರಣೆಗಾಗಿ ರಾಷ್ಟ್ರೀಯ ವಿಪತ್ತು ಪರಿಹಾರ ಪಡೆ ಮತ್ತು ಎಸ್ಡಿಆರ್ಎಫ್ ತಂಡಗಳನ್ನು ನಿಯೋಜಿಸಿತು. 2-3 ದಿನಗಳ ಹಿಂದಷ್ಟೇ 150 ಮೀಟರ್ನಷ್ಟು ಹಾನಿಗೊಳಗಾದ ರಸ್ತೆಯನ್ನು ದುರಸ್ತಿಗೊಳಿಸಿದ ಬಳಿಕ ಈ ಮಾರ್ಗದಲ್ಲಿ ಸಂಚಾರವನ್ನು ಪುನಃ ಸ್ಥಾಪಿಸಲಾಗಿದೆ.
ಜುಲೈ 31ರಂದು ಭಾರೀ ಮಳೆಯಿಂದ ಉಂಟಾದ ಭೂಕುಸಿತದಲ್ಲಿ ಈ ಮಾರ್ಗ ನೆಲಸಮವಾಗಿತ್ತು. ನಿನ್ನೆ ಭೂಕುಸಿತದ ಬಳಿಕ ರಾಜ್ಯ ವಿಪತ್ತು ನಿಧಿ ಮತ್ತು ರಾಷ್ಟ್ರೀಯ ವಿಪತ್ತು ನಿಧಿಯ ಸಿಬ್ಬಂದಿ ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದರು. ಆದರೆ ಮುಂದುವರಿದ ಮಳೆ ಮತ್ತು ಮೋಡ ಕವಿದಿರುವ ಹಿನ್ನೆಲೆಯಲ್ಲಿ ರಕ್ಷಣಾ ಕಾರ್ಯಾಚರಣೆಗೆ ಅಡ್ಡಿಯುಂಟಾಗಿದೆ.