ಬೆಂಗಳೂರು, ಸೆ.12 (DaijiworldNews/AK): ಮುಡಾ ಹಗರಣದಲ್ಲಿ ತಮ್ಮ ಪ್ರಾಸಿಕ್ಯೂಷನ್ಗೆ ಒಪ್ಪಿಗೆ ನೀಡುವ ರಾಜ್ಯಪಾಲ ತಾವರಚಂದ್ ಗೆಹ್ಲೋಟ್ ಅವರ ನಿರ್ಧಾರದ ವಿರುದ್ಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸಲ್ಲಿಸಿದ ರಿಟ್ ಅರ್ಜಿಯ ವಿಚಾರಣೆಯನ್ನು ಕರ್ನಾಟಕ ಹೈಕೋರ್ಟ್ ಗುರುವಾರ ಕೈಗೆತ್ತಿಕೊಂಡಿದೆ.
ವಾದಮಂಡನೆ ಮುಕ್ತಾಯವಾಗಿದ್ದು, ತೀರ್ಪು ಕಾಯ್ದಿರಿಸಿದೆ.
ಈ ಹಿನ್ನಲೆ ಹೈಕೋರ್ಟ್ ಏನು ತೀರ್ಪು ಕೊಡುತ್ತೆ ಎಂದು ಕೂತೂಹಲ ಮೂಡಿಸಿದೆ.ಸಿದ್ದರಾಮಯ್ಯ ಪರ ವಾದ ಮಂಡಿಸಿದ ಹಿರಿಯ ವಕೀಲ ಅಭಿಷೇಕ್ ಮನು ಸಿಂಘ್ವಿ ಅವರು, ರಾಜ್ಯಪಾಲರು ಜನರಿಂದ ಆಯ್ಕೆಯಾದವರಲ್ಲ, ಅವರನ್ನು ನೇಮಕ ಮಾಡುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯಪಾಲರಿಗೆ ಹೆಚ್ಚಿನ ಹೊಣೆಗಾರಿಕೆ ಇದೆ.
23 ವರ್ಷಗಳ ಹಿಂದಿನ ಪ್ರಕರಣದಲ್ಲಿ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಒಪ್ಪಿಗೆ ನೀಡಿದ್ದಾರೆ ಮತ್ತು ಈ ಕ್ರಮವು ರಾಷ್ಟ್ರಪತಿ ಆಳ್ವಿಕೆಯನ್ನು ಹೇರುವುದಕ್ಕಿಂತ ಹೆಚ್ಚು ರಾಜಕೀಯ ಪ್ರೇರಿತವಾಗಿದೆ ಎಂದು ಅವರು ಹೇಳಿದರು.
ಸಿಂಘ್ವಿ ಅವರನ್ನು ಪ್ರಶ್ನಿಸಿದ ಪೀಠ, ರಾಜ್ಯಪಾಲರು ಸಚಿವ ಸಂಪುಟದ ನಿರ್ಧಾರಕ್ಕೆ ಬದ್ಧರಾಗುವ ಅಗತ್ಯವಿಲ್ಲ ಮತ್ತು ಅದು ಅವರ ವಿವೇಚನೆಗೆ ಬಿಟ್ಟದ್ದು, ಕಾರಣಗಳನ್ನು ನೀಡದೆ ರಾಜ್ಯಪಾಲರು ಸಂಪುಟದ ಸಲಹೆಯನ್ನು ತಿರಸ್ಕರಿಸುವಂತಿಲ್ಲ ಎಂದು ವಾದಿಸಿದರು.