ಬೆಂಗಳೂರು,ಸೆ.13 (DaijiworldNews/ AK):ದೆಹಲಿ ಮುಖ್ಯಮಂತ್ರಿ ಅರವಿಂದ್ ಕ್ರೇಜಿವಾಲ್ ಅವರಿಗೆ ಜಾಮೀನು ನೀಡಿ ಜೈಲಿನಿಂದ ಬಿಡುಗಡೆಗೊಳಿಸಿದ ಸುಪ್ರೀಂಕೋರ್ಟ್ ಆದೇಶ ದೇಶದ ನ್ಯಾಯಾಂಗದ ಮೇಲಿನ ನಮ್ಮೆಲ್ಲರ ನಂಬಿಕೆಯನ್ನು ಇನ್ನಷ್ಟು ದೃಢೀಕರಿಸಿದೆ.ಸತ್ಯ ಮತ್ತು ನ್ಯಾಯದ ಪರವಾಗಿ ಹೋರಾಡುತ್ತಿರುವವರೆಲ್ಲರಿಗೂ ಈ ಆದೇಶ ಭರವಸೆ ಹುಟ್ಟಿಸಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.
ಈ ಕುರಿತು ಎಕ್ಸ್ನಲ್ಲಿ ಅವರು, ಸುಪ್ರೀಂಕೋರ್ಟ್ ನ ಈ ಆದೇಶ ಸಾಂವಿಧಾನಿಕ ಸಂಸ್ಥೆಗಳನ್ನು ತಮ್ಮ ರಾಜಕೀಯ ದ್ವೇಷ ಸಾಧನೆಗಾಗಿ ದುರ್ಬಳಕೆ ಮಾಡಿಕೊಳ್ಳುತ್ತಿರುವ ಕೇಂದ್ರದ ಸರ್ಕಾರಕ್ಕೆ ಕೊಟ್ಟ ತಪರಾಕಿಯಾಗಿದೆ. ದ್ವೇಷದ ರಾಜಕಾರಣಕ್ಕೆ ಇಳಿದಿರುವ ನೇತೃತ್ವದ ಸರ್ಕಾರ ನ್ಯಾಯಾಲಯದ ಈ ಆದೇಶದಿಂದಾದರೂ ಪಾಠ ಕಲಿತು ಎಚ್ಚೆತ್ತುಕೊಳ್ಳಲಿ ಎಂದರು ವಾಗ್ದಾಳಿ ನಡೆಸಿದ್ದಾರೆ.
ಅಂತಿಮವಾಗಿ ಸತ್ಯವೇ ಗೆಲ್ಲುವುದು, ನ್ಯಾಯವೇ ಬಾಳುವುದು. ಸತ್ಯಮೇವ ಜಯತೆ ಎಂದಿದ್ದಾರೆ.