ಬೆಂಗಳೂರು, ಸೆ.17(DaijiworldNews/AA): ಜಾತಿ ನಿಂದನೆ ಹಾಗೂ ಜೀವ ಬೆದರಿಕೆ ಹಾಕಿರುವ ಆರೋಪದ ಮೇರೆಗೆ ಬಂಧನಕ್ಕೊಳಗಾಗಿರುವ ಬಿಜೆಪಿ ಶಾಸಕ ಮುನಿರತ್ನ ಅವರಿಗೆ ನ್ಯಾಯಾಂಗ ಬಂಧನ ವಿಧಿಸಿ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು ಆದೇಶ ಹೊರಡಿಸಿದೆ.
ಮುನಿರತ್ನ ಅವರ ಪರ ಹಿರಿಯ ವಕೀಲ ಅಶೋಕ್ ಹಾರ್ನಳ್ಳಿ ಅವರು ವಾದ ಮಂಡಿಸಿದರು. ಪ್ರಕರಣದ ವಿಚಾರಣೆ ನಡೆಸಿದ ನ್ಯಾಯಾಲಯ, ಮುನಿರತ್ನಗೆ ನ್ಯಾಯಾಂಗ ಬಂಧನ ವಿಧಿಸಿ ತೀರ್ಪು ನೀಡಿದೆ. ಜೊತೆಗೆ ವಿಚಾರಣೆಯನ್ನು ನಾಳೆಗೆ ಮುಂದೂಡಿದೆ.
ಲಂಚ ಹಾಗೂ ಜಾತಿ ನಿಂದನೆ ಆರೋಪದ ಮೇರೆಗೆ ದಾಖಲಾಗಿದ್ದ ಪ್ರಕರಣ ಸಂಬಂಧ ಮುನಿರತ್ನ ಅವರನ್ನು ಪೊಲೀಸರು ಶನಿವಾರ ವಶಕ್ಕೆ ಪಡೆದು, ಬಂಧಿಸಿದ್ದರು. ಬಂಧನಕ್ಕೊಳಗಾಗಿದ್ದ ಮುನಿರತ್ನ ಅವರನ್ನು ಎರಡು ದಿನ ಪೊಲೀಸರ ವಶಕ್ಕೆ ನೀಡಿ ಶಾಸಕರು-ಸಂಸದರ ವಿರುದ್ಧದ ಕ್ರಿಮಿನಲ್ ಪ್ರಕರಣಗಳ ವಿಚಾರಣೆಯ ವಿಶೇಷ ನ್ಯಾಯಾಲಯ ಭಾನುವಾರ ಆದೇಶಿಸಿತ್ತು.