ನವದೆಹಲಿ, ಸೆ.18 (DaijiworldNews/AK): ಒಂದು ದೇಶ ಒಂದು ಚುನಾವಣೆ ಮಸೂದೆ ಮುಂದಿನ ಸಂಸತ್ ಅಧಿವೇಶನದಲ್ಲಿ ಮಂಡನೆಯಾಗಲಿದೆ. ಇಂದು ಮೋದಿ ನೇತೃತ್ವದಲ್ಲಿ ನಡೆದ ಕ್ಯಾಬಿನೆಟ್ ಸಭೆ ಈ ಮಸೂದೆಗೆ ಒಪ್ಪಿಗೆ ನೀಡಿದೆ.
ಮಾಜಿ ರಾಷ್ಟ್ರಪತಿ ರಾಮನಾಥ್ ಕೋವಿಂದ್ ನೇತೃತ್ವದ ಉನ್ನತ ಮಟ್ಟದ ಸಮಿತಿ ಈ ವರ್ಷದ ಮಾರ್ಚ್ 14 ರಂದು ‘ಒಂದು ರಾಷ್ಟ್ರ, ಒಂದು ಚುನಾವಣೆ’ ಕುರಿತು ತನ್ನ ವರದಿಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಗೆ ಸಲ್ಲಿಸಿತ್ತು.
ಮಾಜಿ ರಾಷ್ಟ್ರಪತಿ ರಾಮ್ ನಾಥ್ ಕೋವಿಂದ್ ನೇತೃತ್ವದ ಸೆಪ್ಟೆಂಬರ್ನಲ್ಲಿ ರಚಿಸಲಾದ ಸಮಿತಿಯ ವರದಿಯನ್ನು ಅಂಗೀಕರಿಸಿದ ಕೇಂದ್ರ ಸಚಿವ ಸಂಪುಟವು 'ಒಂದು ರಾಷ್ಟ್ರ, ಒಂದು ಚುನಾವಣೆ' ಪ್ರಸ್ತಾವನೆಗೆ ಬುಧವಾರ ಅನುಮೋದನೆ ನೀಡಿದೆ.