ಚಂಡೀಗಢ, ಸೆ.18 (DaijiworldNews/AK): ಅಕ್ಟೋಬರ್ 5ರಂದು ನಡೆಯಲಿರುವ ಹರಿಯಾಣ ವಿಧಾನಸಭಾ ಚುನಾವಣೆಗೆ ಸಂಬಂಧಿಸಿದಂತೆ ಪ್ರಚಾರ ಕಾರ್ಯ ಆರಂಭಿಸಿರುವ ಕಾಂಗ್ರೆಸ್ ಪಕ್ಷವು ರಾಜ್ಯಕ್ಕೆ ಸಪ್ತ ಗ್ಯಾರಂಟಿಗಳನ್ನು ಘೋಷಣೆ ಮಾಡಿದೆ.
ಬುಧವಾರ ದೆಹಲಿಯ ಕಾಂಗ್ರೆಸ್ ಪಕ್ಷದ ಕಚೇರಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ನೇತೃತ್ವದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ 7 ಗ್ಯಾರಂಟಿಗಳನ್ನೊಳಗೊಂಡ ಪ್ರಣಾಳಿಕೆ ಬಿಡುಗಡೆ ಮಾಡಲಾಯಿತು.
ಈ ವೇಳೆ ಹರಿಯಾಣದಲ್ಲಿ ಕಾಂಗ್ರೆಸ್ ಸರ್ಕಾರ ಗೆದ್ದರೆ, ಪ್ರತೀ ಮನೆಗೆ 300 ಯೂನಿಟ್ ವಿದ್ಯುತ್ ಉಚಿತವಾಗಿ ನೀಡಲಾಗುವುದು. 500 ರೂ. ಬೆಲೆಗೆ ಉಚಿತ ಎಲ್ಪಿಜಿ ಸಿಲಿಂಡರ್, ಬಡವರಿಗೆ 100 ಚದರ ಅಡಿ ನಿವೇಶನ ಮತ್ತು ಮನೆಗೆ ಕಟ್ಟಲು 3.5 ಲಕ್ಷ ರೂ. ಹಣ ನೀಡಲಾಗುತ್ತದೆ ಎಂದು ಗ್ಯಾರಂಟಿಗಳನ್ನು ಪ್ರಕಟಿಸಿದರು.