ಬೆಂಗಳೂರು, ಸೆ.19 (DaijiworldNews/ AK): ಹಿಂದಿನ ಸರ್ಕಾರದ ಅವಧಿಯಲ್ಲಿ ದೇಶಾದ್ಯಂತ ಸುದ್ದಿ ಮಾಡಿದ್ದ 40% ಕಮಿಷನ್ ಹಗರಣವನ್ನು ಹೊರತಂದು, ಗುತ್ತಿಗೆ ಕಾಮಗಾರಿಗಳಲ್ಲಿ ನಡೆಯುತ್ತಿದ್ದ ಭ್ರಷ್ಟಾಚಾರದ ವಿರುದ್ಧ ಸೆಟೆದು ನಿಂತಿದ್ದ ಗುತ್ತಿಗೆದಾರರ ಸಂಘದ ಅಧ್ಯಕ್ಷ ಕೆಂಪಣ್ಣ (84) ಗುರುವಾರ ನಿಧನರಾದರು. ಬೆಂಗಳೂರಿನ ಜ್ಯೋತಿಪುರದ ನಿವಾಸದಲ್ಲಿ ಹೃದಯಾಘಾತದಿಂದ ಅವರು ಕೊನೆಯುಸಿರೆಳೆದರು.
ಕಳೆದ ಕೆಲವು ದಿನಗಳಿಂದ ಅನಾರೋಗ್ಯದಿಂದ ಬಳಲುತ್ತಿದ್ದ ಕೆಂಪಣ್ಣ ಮೊನ್ನೆಯಷ್ಟೇ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಡಿಸ್ಚಾರ್ಜ್ ಆಗಿ ಮನೆಗೆ ವಾಪಾಸಾಗಿದ್ದರು. ಇಂದು ಬೆಳಗ್ಗೆ 10 ಗಂಟೆಗೆ ಇಹಲೋಕ ತ್ಯಜಿಸಿದ್ದಾರೆ ಎಂದು ಕೆಂಪಣ್ಣ ಆಪ್ತರು, ಕುಟುಂಬದ ಮೂಲಗಳು ತಿಳಿಸಿವೆ.
ಯಾವುದೇ ಒತ್ತಡ, ಆಮಿಷಗಳಿಗೆ ಒಳಗಾಗದ ನಿರ್ಭೀತ ಧ್ವನಿಯೊಂದನ್ನು ಕಾಂಗ್ರೆಸ್ ಆಡಳಿತದಲ್ಲೂ ಶೇ 40ರ ಕಮಿಷನ್ ಮುಂದುವರಿದಿದೆ ಎಂದು ಕೆಂಪಣ್ಣ ಫೆಬ್ರವರಿಯಲ್ಲಿ ಆರೋಪಿಸಿದ್ದರು.